News Kannada
Monday, September 26 2022

ಕರ್ನಾಟಕ

ಲಾಕ್‌ ಡೌನ್‌ ನಡುವೆ ತರಗತಿ ; ದಂತ ವೈದ್ಯಕೀಯ ಕಾಲೇಜು ವಿರುದ್ದ ಮೊಕದ್ದಮೆ - 1 min read

Photo Credit :

ಲಾಕ್‌ ಡೌನ್‌ ನಡುವೆ ತರಗತಿ ; ದಂತ ವೈದ್ಯಕೀಯ ಕಾಲೇಜು ವಿರುದ್ದ ಮೊಕದ್ದಮೆ

ಮಡಿಕೇರಿ: ಕೊರೋನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ‌ ಶಾಲಾ, ಕಾಲೇಜುಗಳನ್ನು ಬಂದ್ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದ್ದರೂ ವಿರಾಜಪೇಟೆಯ ಖಾಸಗಿ ಡೆಂಟಲ್ ಕ್ಲಿನಿಕ್‌ವೊಂದು ನಿಯಮವನ್ನು ಗಾಳಿಗೆ ತೂರಿದ ಪರಿಣಾಮ ಕಾಲೇಜು ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಡೆಂಟಲ್ ಕಾಲೇಜಿನಲ್ಲಿ ತರಗತಿಗಳು ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ವಿರಾಜಪೇಟೆ ತಹಸಿಲ್ದಾರ್ ಆರ್.ಯೋಗಾನಂದ್ ಪೊಲೀಸರೊಂದಿಗೆ ಸೋಮವಾರ ಕೂರ್ಗ್‌ ಇನ್ಸ್‌ಟಿಟ್ಯೂಟ್‌ ಆಫ್‌ ಡೆಂಟಲ್‌ ಸೈನ್ಸಸ್‌ ಕಾಲೇಜಿನ ಮೇಲೆ ಏಕಾಏಕಿ ದಾಳಿ ಮಾಡಿದರು. ಈ ವೇಳೆ ಕಾಲೇಜಿನಲ್ಲಿ ಕೋವಿಡ್ ನಿಯಮಗಳನ್ನು ಮೀರಿ ಆಂತರಿಕ ಪರೀಕ್ಷೆಗಳನ್ನು ನಡೆಸುತ್ತಿರುವುದು ಕಂಡು ಬಂತು. ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಲ್ಯಾಬ್ ತರಗತಿಗಳನ್ನು ನಡೆಸುತ್ತಿದ್ದನ್ನು ಗಮನಿಸಿದರು. ಈ ವೇಳೆ ಉಪನ್ಯಾಸಕರನ್ನು ವಿಚಾರಿಸಿದಾಗ ನಾವು ಯಾವುದೇ ತರಗತಿ ನಡೆಸುತ್ತಿರಲಿಲ್ಲ. ಸಂಶೋಧನೆಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದೆವು ಎಂದು ಸಮಾಜಾಯಿಷಿ ನೀಡಿದ್ದಾರೆ.
ಇದೇ ವೇಳೆ ತರಗತಿ ಕೊಠಡಿಗಳಿಂದ ಹೊರಗೆ ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಕೇಳಿದಾಗ ವಿದ್ಯಾರ್ಥಿಗಳು ಲ್ಯಾಬ್ ತರಗತಿಯಲ್ಲಿ ಇದ್ದೆವು ಎನ್ನೋದನ್ನು ಒಪ್ಪಿಕೊಂಡರು. ಜೊತೆಗೆ ಕಾಲೇಜು ಆವರಣದಲ್ಲಿರುವ ಹೋಟೆಲಿನಲ್ಲಿ ವಿದ್ಯಾರ್ಥಿಗಳಿಗೆ ಅಲ್ಲಿಯೇ ಊಟ ನೀಡಲಾಗುತ್ತಿತ್ತು. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಒಂದೊಂದು ಟೇಬಲ್‍ನಲ್ಲೂ ಗುಂಪು ಗುಂಪಾಗಿ ಕುಳಿತು ಊಟ ಮಾಡುತ್ತಿದ್ದರು,
ತಕ್ಷಣವೇ ಎಚ್ಚೆತ್ತುಕೊಂಡು ತಹಸಿಲ್ದಾರ್ ಇದ್ದ ಸ್ಥಳಕ್ಕೆ ಬಂದ ಕಾಲೇಜು ಡೀನ್ ತರಗತಿ ನಡೆಸುವುದಕ್ಕೆ ನಮಗೆ ಅವಕಾಶ ಇದೆ ಎಂದು ಸಮಜಾಯಿಷಿ ನೀಡಲು ಪ್ರಯತ್ನಿಸಿದರು. ಆದರೆ ತಹಸಿಲ್ದಾರ್ ಅವರು ಎಲ್ಲವನ್ನೂ ಪರಿಶೀಲಿಸಿ ಕಾಲೇಜು ವಿರುದ್ಧ ಶಿಸ್ತು ಕ್ರಮ ಕೈಗೊಂಡು ಸರ್ಕಾರದ ನಿಯಮದ ಪ್ರಕಾರ ಪ್ರಕರಣ ದಾಖಲಿಸಲಾಗುವುದು. ಕಾಲೇಜಿನಲ್ಲಿ ಹಲವು ವಿಷಯಗಳಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಹೀಗಾಗಿ ಕಾಲೇಜು ವಿರುದ್ಧ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

See also  ನಿಖಿಲ್ ನಾಮಪತ್ರ ಸಿಂಧು ಎಂದ ಜಿಲ್ಲಾಧಿಕಾರಿ  
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು