News Kannada
Thursday, October 06 2022

ಕರ್ನಾಟಕ

ಕೊಡಗಿನಲ್ಲಿ 1 ತಿಂಗಳ ಕಾಲ ಪ್ರವಾಸೋದ್ಯಮವನ್ನು ಸಂಪೂರ್ಣ ಬಂದ್ ಮಾಡಲು ಒತ್ತಾಯ - 1 min read

Photo Credit :

ಕೊಡಗಿನಲ್ಲಿ 1 ತಿಂಗಳ ಕಾಲ  ಪ್ರವಾಸೋದ್ಯಮವನ್ನು ಸಂಪೂರ್ಣ ಬಂದ್ ಮಾಡಲು ಒತ್ತಾಯ

ಮಡಿಕೇರಿ : ಕೊಡಗಿನಲ್ಲಿ 1 ತಿಂಗಳ ಕಾಲ ರೆಸಾರ್ಟ್, ಹೋಂಸ್ಟೇ ಸೇರಿದಂತೆ ಪ್ರವಾಸೋದ್ಯಮವನ್ನು ಸಂಪೂರ್ಣ ಬಂದ್ ಮಾಡಬೇಕೆಂದು ಅಖಿಲ ಕೊಡವ ಸಮಾಜ, ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.
ಜಿಲ್ಲೆಯಲ್ಲಿ ಮತ್ತೆ ಕೊರೋನ ಅಟ್ಟಹಾಸ ಮುಂದುವರಿದಿದ್ದು ಕೊವೀಡ್-19 ಸೋಂಕಿತರ ಸಂಖ್ಯೆ ಹತ್ತು ಸಾವಿರದ ಗಡಿ ದಾಟಿದೆ. ಒಂದು ಸಮಯದಲ್ಲಿ ಕೊರೋನ ಮುಕ್ತವಾಗಿ ಹಸಿರು ವಲಯದಲ್ಲಿ ಗುರುತ್ತಿಸಿಕೊಂಡಿದ್ದ ಕೊಡಗು ಜಿಲ್ಲೆ ಇದೀಗ ಕೊರೋನ ಪಾಸಿಟಿವಿಟಿ ದರ ಶೇ.15ಕ್ಕಿಂತ ಅಧಿಕವಿರುವ ಟಾಪ್ ಟೆನ್ ಜಿಲ್ಲೆಗಳ ಪೈಕಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಜಿಲ್ಲೆಯ ಪರಿಸ್ಥಿತಿ ಹೀಗೆ ಮುಂದುವರಿದರೆ ಏನಾಗುತ್ತೆ ಎಂದು ಊಹಿಸಲು ಅಸಾಧ್ಯ ಎನ್ನಬಹುದು. ಕೂಡಲೇ ಜಿಲ್ಲೆಯ ಪ್ರವಾಸೋದ್ಯಮವನ್ನು ಸಂಪೂರ್ಣ ಒಂದು ತಿಂಗಳು ಬಂದ್ ಮಾಡಿ, ರೇಸಾರ್ಟ್, ಹೋಂಸ್ಟೇ ಸೇರಿದಂತೆ ವಸತಿ ಗೃಹಗಳನ್ನು ಸಂಪೂರ್ಣ ಒಂದು ತಿಂಗಳ ಕಾಲ ಮುಚ್ಚಬೇಕಿದೆ ಎಂದು ಅಖಿಲ ಕೊಡವ ಸಮಾಜ, ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್‌ ಆಗ್ರಹಿಸಿದೆ.

ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಈ ಮೂರು ಸಂಸ್ಥೆಗಳ ಅಧ್ಯಕ್ಷರುಗಳಾದ ಮಾತಂಡ ಮೊಣ್ಣಪ್ಪ, ಬಾಚರಣಿಯಂಡ ರಾಣು ಅಪ್ಪಣ್ಣ ಹಾಗೂ ಚಮ್ಮಟೀರ ಪ್ರವೀಣ್ ಉತ್ತಪ್ಪ ಜಿಲ್ಲಾಡಳಿತವನ್ನು ಪ್ರವಾಸೋದ್ಯಮವನ್ನು ಕನಿಷ್ಟ ಒಂದು ತಿಂಗಳ ಕಾಲ ಬಂದ್ ಮಾಡಲು ಒತ್ತಾಯಿಸಿದ್ದು ಜನಪ್ರತಿನಿಧಿಗಳು ಇದಕ್ಕೆ ಪೂರಕವಾಗಿ ಸಹಕರಿಸಬೇಕಿದೆ ಎಂದಿದ್ದಾರೆ.
14 ದಿನಗಳ ಲಾಕ್ ಡೌನ್ ಅವಧಿ ಮುಗಿದ ನಂತರ ಕೂಡ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಕೊಡಗಿಗೆ ಬರುವ ಪ್ರವಾಸಿಗರಿಗೆ ಕಡಿವಾಣ ಹಾಕಬೇಕು ಇಲ್ಲದಿದ್ದರೆ ಕೊಡಗಿನಲ್ಲಿ ದೆಹಲಿಯ ಪರಿಸ್ಥಿತಿ ತಲೆದೂರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ.
ಅದರಲ್ಲೂ ಕರ್ನಾಟಕದಲ್ಲಿ ಕೊವೀಡ್-19 ಸೋಂಕಿತರ ಹಾಗೂ ಕೊವೀಡ್ ಸೋಂಕು ಅಧಿಕವಾಗುತ್ತಿರುವ ಜಿಲ್ಲೆಗಳಲ್ಲಿ ಕೊಡಗು ಜಿಲ್ಲೆ ಅಗ್ರಸ್ಥಾನವನ್ನು ಪಡೆದುಕೊಂಡಿದ್ದು, ಅತ್ಯಂತ ಪುಟ್ಟ ಜಿಲ್ಲೆಯಾದ ಕೊಡಗಿನ ಪರಿಸ್ಥಿತಿ ಇದೀಗ ದಿನದಿಂದ ದಿನಕ್ಕೆ ಹದಗೆಡುತ್ತಿದೆ.ರಾಜ್ಯದಲ್ಲಿಯೇ ಕೊರೋನ ಹರಡುತ್ತಿರುವ ಟಾಪ್ ಟೆನ್ ಜಿಲ್ಲೆಗಳಲ್ಲಿ ಕೊಡಗು ಜಿಲ್ಲೆ ಮೊದಲ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ಜನರಲ್ಲಿ ಆತಂಕ ಮನೆ ಮಾಡಿದೆ. ಅಂಕಿಅಂಶಗಳ ಪ್ರಕಾರ ಕೊರೋನ ಪಾಸಿಟಿವಿಟಿ ದರ ಶೇ.15 ಹೆಚ್ಚಿರುವ ಜಿಲ್ಲೆಗಳ ಪೈಕಿ ಕೊಡಗು ಜಿಲ್ಲೆ ಒಂದನೇ ಸ್ಥಾನವನ್ನು ಪಡೆದುಕೊಂಡಿರುವುದು ವಿಷಾದನೀಯ.

ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.

See also  ಮಲೆನಾಡನ್ನು ಬೆಚ್ಚಿಬೀಳಿಸಿದ ಹನಿಟ್ರಾಪ್ ಪ್ರಕರಣ: ಪೊಲೀಸ್ ಠಾಣೆಯಿಂದ್ಲೇ ನಾಪತ್ತೆಯಾದ ತಂಡ !
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು