ಚಿತ್ರದುರ್ಗ : ನಗರದ ಎಸ್.ಜೆ.ಎಂ. ವಿದ್ಯಾಪೀಠದಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಎಂ.ಜಿ.ದೊರೆಸ್ವಾಮಿ (53ವರ್ಷ) ಕೊರೋನಾ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾದರು.
ಮೃತರು ಪತ್ನಿ, ಪುತ್ರ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಸ್ವಗ್ರಾಮ ಗೊಡಬನಹಾಳ್‍ನಲ್ಲಿ ಇಂದು ನೆರವೇರಿಸಿದರು.
ಶ್ರೀಯುತರ ಅಗಲಿಕೆಯ ನೋವನ್ನು ಅವರ ಕುಟುಂಬದವರು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಕರುಣಿಸಲಿ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಸ್‍ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ ಸೇರಿದಂತೆ ವಿದ್ಯಾಪೀಠದ ಎಲ್ಲ ಸಂಸ್ಥೆಗಳ ಸಮಸ್ತ ನೌಕರ ಬಾಂಧವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.