News Kannada
Wednesday, February 01 2023

ಬೆಂಗಳೂರು

ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

Photo Credit :

ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಹಾಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿರುವ ಗೆಹ್ಲೋಟ್ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚರನೆ ಬೆನ್ನಲ್ಲೇ ನೇಮಕಾತಿಯಾಗಿದೆ. ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕರಿಸಲಿದ್ದಾರೆ.
ಕರ್ನಾಟಕ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್​ ನೇಮಕವಾಗುವ ಜತೆಗೆ ಒಟ್ಟು 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದೆ. ಜಾರ್ಖಂಡ್​, ಹರಿಯಾಣ, ಮಿಜೋರಾಂ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಗೋವಾ, ತ್ರಿಪುರಾ ರಾಜ್ಯಗಳಿಗೂ ಹೊಸ ರಾಜ್ಯಪಾಲರು ನೇಮಕವಾಗಿದ್ದಾರೆ. ಮಿಜೋರಾಂಗೆ ಹರಿಬಾಬು ಕಂಭಂಪತಿ, ಮಧ್ಯಪ್ರದೇಶಕ್ಕೆ ಮಂಗೂಭಾಯ್ ಛಗನ್‌ಭಾಯ್ ಪಟೇಲ್, ಹಿಮಾಚಲಪ್ರದೇಶಕ್ಕೆ ರಾಜೇಂದ್ರನ್ ವಿಶ್ವನಾಥ್ ಅರ್ಲೇಕರ್, ಗೋವಾಕ್ಕೆ ಪಿ.ಎಸ್.ಶ್ರೀಧರನ್ ಪಿಳ್ಳೈ, ತ್ರಿಪುರಾಕ್ಕೆ ಸತ್ಯದೇವ್ ನಾರಾಯಣ್ ಆರ್ಯ, ಜಾರ್ಖಂಡ್​ಗೆ ರಮೇಶ್ ಬೈಸ್, ಹರಿಯಾಣಕ್ಕೆ ಬಂಡಾರು ದತ್ತಾತ್ತ್ರೇಯ ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
84 ವರ್ಷದ ವಜೂಬಾಯಿ ವಾಲಾ ಅವರು 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ 18ನೆಯ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದೀಗ 19ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್​ ನೇಮಕವಾಗಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್​ ಸದ್ಯ ಕೇಂದ್ರ ಸಚಿವರಾಗಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಅವರು, ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈಗ ರಾಜ್ಯಸಭೆಯ ಸದಸ್ಯರೂ ಆಗಿರುವ ಅವರು ಈ ಹಿಂದೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದರು. ಸಂಘ ಪರಿವಾರದ ಹಿನ್ನೆಲೆಯ ತಾವರ್‌ಚಂದ್ ಗೆಹ್ಲೋಟ್, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೂ ಆಗಿದ್ದರು.

 

See also  ಕೇಂದ್ರ ಸರ್ಕಾರವು ರಾಜ್ಯಗಳನ್ನು ಬಲಪಡಿಸುವ ಬದಲು ದುರ್ಬಲಗೊಳಿಸುತ್ತಿದೆ: ಅಶೋಕ್ ಗೆಹಲೋತ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು