NewsKarnataka
Sunday, September 26 2021

ಕರ್ನಾಟಕ

ದಿಢೀರ್ ದೆಹಲಿಗೆ ರಾಜ್ಯಪಾಲ ಗೆಹ್ಲೋಟ್: ಕುತೂಹಲ ಹೆಚ್ಚಿಸಿದ ಭೇಟಿ

ಬೆಂಗಳೂರು: ಇತ್ತೀಚೆಗಷ್ಟೆ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ದಿಢೀರ್ ಆಗಿ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ನಡುವೆ ರಾಜ್ಯಪಾಲರ ​ ಪ್ರವಾಸ ಸಾಕಷ್ಟು ಕುತೂಹಲ ಮೂಡುವಂತೆ ಮಾಡಿದೆ.
ಕಳೆದ ಜುಲೈ 11 ರಂದು ರಾಜ್ಯದ ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದ ಅವರು ಒಂದು ವಾರ ನಿರಂತರವಾಗಿ ಆಡಳಿತ ಮತ್ತು ಪ್ರತಿಪಕ್ಷ ನಾಯಕರ ಭೇಟಿಗೆ ಸಮಯಾವಕಾಶ ನೀಡಿದ್ದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಿರಿಯ ಸಚಿವರು, ಪ್ರತಿಪಕ್ಷ ನಾಯಕರು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಿಗೆ ಶುಭ ಕೋರಿದ್ದರು.ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿ ಎಂಟು ದಿನಗಳಲ್ಲೇ ಗೆಹ್ಲೋಟ್ ನವದೆಹಲಿಗೆ ತೆರಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು,‌ ರಾಜ್ಯ ಸರ್ಕಾರದ ಎರಡು ವರ್ಷದ ಸಾಧನಾ ಸಮಾರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯಪಾಲರು ದೆಹಲಿಗೆ ತೆರಳಿರುವುದು ಬಿಜೆಪಿ ನಾಯಕರಲ್ಲಿ ಕುತೂಹಲ ಮೂಡುವಂತೆ ಮಾಡಿದೆ.ಸಿಎಂ ರಾಜೀನಾಮೆ ನೀಡಿದ್ರೆ, ಅದರ ಅಂಗೀಕಾರ ಕುರಿತು ಮಾಹಿತಿ ಪಡೆದುಕೊಳ್ಳಲು ರಾಜ್ಯಪಾಲರು ದೆಹಲಿಗೆ ಹೋಗಿರಬಹುದು. ಇಲ್ಲವೇ ರಾಜ್ಯಪಾಲರಿಗೆ ಕೆಲವೊಂದು ನಿರ್ದೇಶನಗಳನ್ನು ನೀಡಲು ಕೇಂದ್ರ ಸರ್ಕಾರ ದೆಹಲಿಗೆ ಕರೆಸಿಕೊಂಡಿದೆ ಎನ್ನಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!