News Kannada
Friday, December 02 2022

ಕರ್ನಾಟಕ

ಯಡಿಯೂರಪ್ಪ ಕಣ್ಣೀರಿಗೆ ಯಾರು ಕಾರಣ ಬಹಿರಂಗಪಡಿಸಿ : ಡಿ ಕೆ ಶಿವಕುಮಾರ್‌

Photo Credit :

ಬೆಂಗಳೂರು: ‘ ಮುಖ್ಯ ಮಂತ್ರಿ ಹುದ್ದೆಯನ್ನು ತ್ಯಜಿಸುವಾಗ ಯಡಿಯೂರಪ್ಪ ಅವರು ಕಣ್ಣೀರು ಹಾಕಿದ್ದಾರೆ ಇದಕ್ಕೆ ಕಾರಣವೇನು ? ಇದು ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರು ಯಾರು?’ ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಅವರ ರಾಜೀನಾಮೆ ಹಿಂದೆ ಸಂತೋಷ ಕಾಣುತ್ತಿಲ್ಲ. ಬದಲಿಗೆ ಅವರ ನಿರ್ಧಾರದಲ್ಲಿ ನೋವು ಕಾಣುತ್ತಿದೆ. ಆ ನೋವು ಏನು’ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು ಎಂದರು.
‘ರಾಜೀನಾಮೆ ಕುರಿತ ನಮ್ಮ ಪಕ್ಷದ ಅಭಿಪ್ರಾಯವನ್ನು ಮುಂದೆ ತಿಳಿಸುತ್ತೇವೆ. ಆದರೆ, ಅದಕ್ಕೂ ಮೊದಲು ಮುಖ್ಯಮಂತ್ರಿ ತಮ್ಮ ನೋವಿನ ಬಗ್ಗೆ ಜನರಿಗೆ ತಿಳಿಸಬೇಕು. ಎರಡು ವರ್ಷಗಳಲ್ಲಿ ಜನರು ಕೋವಿಡ್ ಸಮಸ್ಯೆಗೆ ತುತ್ತಾಗಿದ್ದರಿಂದ ನೋವಾಯಿತೇ? ಪಕ್ಷದ ಶಾಸಕರನ್ನು ಹೈಕಮಾಂಡ್ ನಿಯಂತ್ರಣ ಮಾಡಲಿಲ್ಲ ಎಂದು ನೋವಾಯಿತೇ? ಎಂಬುದು ಜನರಿಗೆ ಗೊತ್ತಾಗಬೇಕು’ ಎಂದರು.

See also  ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ: ಡಾ.ಎಸ್.ಎಚ್.ಮಹೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು