NewsKarnataka
Monday, November 29 2021

ಕರ್ನಾಟಕ

ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ 23 ನೇ ಮುಖ್ಯ ಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಾಂದ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ನೂತನ ಮುಖ್ಯಮಂತ್ರಿ ಕಡತಕ್ಕೆ ಸಹಿ ಹಾಕಿದರು. ನಂತರ ರಾಜ್ಯಪಾಲ ಗೆಹ್ಲೋಟ್ ಅವರು ಸಿಎಂ ಬೊಮ್ಮಾಯಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಇಂದಿನಿಂದ ಬೊಮ್ಮಾಯಿ ರಾಜ್ಯಭಾರ ಶುರುವಾಗಲಿದೆ.
ಶಿಷ್ಯನ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ 30 ನಿಮಿಷ ಮೊದಲೇ ಬಿ.ಎಸ್​.ಯಡಿಯೂರಪ್ಪ ಹಾಜರಿದ್ದರು. ಬೊಮ್ಮಾಯಿ ಕುಟುಂಬಸ್ಥರು ಪ್ರಮಾಣವಚನ ಸ್ವೀಕರಿಸುವ ಕ್ಷಣವನ್ನು ಕಣ್ತುಂಬಿಕೊಂಡರು. ನೂತನ ಮುಖ್ಯಮಂತ್ರಿಗೆ ಜೈಕಾರ, ಘೋಷಣೆಗಳು ಮೊಳಗಿದವು. ಯಡಿಯೂರಪ್ಪ ಜತೆ ಬೊಮ್ಮಾಯಿ ಕುಟುಂಬಸ್ಥರು ವಿಕ್ಟರಿ ಸಿಂಬಲ್​ ತೋರಿಸಿ ಗೆಲುವಿನ ನಗೆ ಬೀರಿದರು. ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಬೊಮ್ಮಾಯಿ ಜತೆ ವೇದಿಕೆ ಮುಂಭಾಗ ಬಿಎಸ್ ವೈ ಗೆಲುವಿನ ಸಂಕೇತ ತೋರಿಸಿದರು. ರಾಜಭವನ ಸುತ್ತ ಬಿಗಿಬಂದೋಬಸ್ತ್​ ಏರ್ಪಡಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

C Indresh

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!