ಬೆಂಗಳೂರು: ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಇದ್ದರೂ ಸಾರಿಗೆ ಬಸ್‌ಗಳ ಸಂಚಾರ ಎಂದಿನಂತೆ ಇರಲಿದೆ ಎಂದು ಕೆಎಸ್ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಂತರರಾಜ್ಯ ಬಸ್‌ಗಳ ಸಂಚಾರ ಮೊದಲೇ ಕಡಿಮೆ ಇದೆ. ಕರ್ಫ್ಯೂ ಇದ್ದರೂ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ವಾರಾಂತ್ಯದ ಕರ್ಫ್ಯೂ ಇಲ್ಲದ ಕಾರಣ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ರಾತ್ರಿ ಕರ್ಫ್ಯೂಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಈ ಹಿಂದಿನಿಂದ ಪಾಲಿಸಲಾಗುತ್ತಿದೆ ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.