ಬೆಂಗಳೂರು: ಸೋಮವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸುವುದಾಗಿ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಮಾಹಿತಿಯನ್ನು ಖಚಿತಪಡಿಸಿದರು. ಸೋಮವಾರ ಸಂಜೆ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದೆ ಎಂದು ಸಹ ಅವರು ತಿಳಿಸಿದರು. ಈಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು. ಈಬಾರಿ ಕೊರೊನಾ ಹಿನ್ನೆಲೆಯಲ್ಲಿ ಜೂನ್ 19, ಜೂನ್ 22ರಂದು 2 ದಿನ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು.
ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ,sslc.karnataka.gov.in,kseeb.kar.nic.in,karresults.nic.in ಕ್ಲಿಕ್ ಮಾಡುವ ಮೂಲಕ ರಿಸಲ್ಟ್ ವೀಕ್ಷಿಸಬಹುದು.
ಸೋಮವಾರದಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ಬಿ ಸಿ ನಾಗೇಶ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.