NewsKarnataka
Wednesday, January 19 2022

ಕರ್ನಾಟಕ

ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ ನಗರ ಪಾಲಿಕೆಗಳಿಗೆ ಚುನಾವಣಾ ದಿನಾಂಕ ಪ್ರಕಟಿಸಿದ ಆಯೋಗ

ಬೆಂಗಳೂರು ; ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ ನಗರ ಪಾಲಿಕೆಗಳಿಗೆ ರಾಜ್ಯ ಚುನಾವಣಾ ಆಯೋಗ ಬುಧವಾರದಂದು (ಆ.11) ಚುನಾವಣಾ ದಿನಾಂಕ ಘೋಷಣೆ ಮಾಡಿ ರಾಜಕೀಯ ಪಕ್ಷಗಳಿಗೆ ದಿಡೀರ್​ ಶಾಕ್​ ನೀಡಿದೆ.

ಆಗಸ್ಟ್ 16 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಆಗಸ್ಟ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ರಾಜ್ಯದಲ್ಲಿ ಉಪ ಚುನಾವಣೆಗಳು ನಡೆದ ನಂತರ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನ ನಡೆಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕೊರೋನಾ ನೆಪ ಮಾಡಿಕೊಂಡು ಚುನಾವಣೆ ಮುಂದೂಡಲಾಗಿತ್ತು,ಇದೀಗ ರಾಜ್ಯದ ಮೂರು ನಗರ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಮೂರು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145
Subscribe to our Brand New YouTube Channel

Subscribe Newsletter

Get latest news karnataka updates on your email.