News Kannada
Saturday, November 26 2022

ಕರ್ನಾಟಕ

ಬೆಂಗಳೂರು-ಮೈಸೂರು ದಶ ಪಥಗಳ ಆರ್ಥಿಕ ಕಾರಿಡಾರ್ 2022ರ ಅಕ್ಟೋಬರ್ ಒಳಗೆ ಪೂರ್ಣ - 1 min read

Photo Credit :

ನವದೆಹಲಿ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಶ ಪಥಗಳ ಆರ್ಥಿಕ ಕಾರಿಡಾರ್ ನಿರ್ಮಾಣ ಕಾಮಗಾರಿಯನ್ನು 2022ರ ಅಕ್ಟೋಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ ತಿಳಿಸಿದರು.
‘10 ಪಥಗಳ ಬೆಂಗಳೂರು-ಮೈಸೂರು ಆರ್ಥಿಕ ಕಾರಿಡಾರ್ ಅನ್ನು ದಾಖಲೆಯ ವೇಗದಲ್ಲಿ ನಿರ್ಮಿಸಲಾಗುತ್ತಿದೆ. ₹8,172 ಕೋಟಿ ವೆಚ್ಚದ ಆರ್ಥಿಕ ಕಾರಿಡಾರ್ 2022ರ ಅಕ್ಟೋಬರ್‌ ಒಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಇದು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಈಗಿನ 3 ಗಂಟೆಯಿಂದ ಒಂದೂವರೆ ಗಂಟೆಗೆ (90 ನಿಮಿಷಕ್ಕೆ) ತಗ್ಗಿಸುತ್ತದೆ’ ಎಂದು ಗಡ್ಕರಿ ಟ್ವೀಟ್ ಮಾಡಿದ್ದಾರೆ.
ಎರಡು ನಗರಗಳ ನಡುವಿನ ರಸ್ತೆ ಯೋಜನೆಯನ್ನು ಭಾರತಮಾಲಾ ಪರಿಯೋಜನ ಹಂತ -1ರ ಅಡಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಎರಡು ಪ್ಯಾಕೇಜ್‌ಗಳಾಗಿ ಕೈಗೆತ್ತಿಕೊಳ್ಳಲಾಗಿದ್ದು, ಮೊದಲನೆಯ ಪ್ಯಾಕೇಜ್‌ನಲ್ಲಿ ಬೆಂಗಳೂರಿನಿಂದ ಮದ್ದೂರು ತಾಲ್ಲೂಕಿನ ನಿಡಘಟ್ಟವರೆಗೆ ಮತ್ತು ಎರಡನೆಯ ಪ್ಯಾಕೇಜ್‌ನಲ್ಲಿ ನಿಡಘಟ್ಟದಿಂದ ಮೈಸೂರಿನವರೆಗೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

See also  ಕೊಡಗನ್ನು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸಿ: ಶಾಸಕ ಬೋಪಯ್ಯ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು