News Kannada
Wednesday, November 30 2022

ಮಂಗಳೂರು

ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಮತ್ತೆ ಏರಿಕೆ: 33 ಮಂದಿ ಬಲಿ - 1 min read

coivd 19
Photo Credit :

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಕೋವಿಡ್‌ ಪ್ರಕರಣ ಏರಿಕೆಯಾಗಿದೆ. 24 ಗಂಟೆಯಲ್ಲಿ 1,826 ಹೊಸ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,22,875ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಬೆಂಗಳೂರಿಗಿಂತ ದಕ್ಷಿಣ ಕನ್ನಡದಲ್ಲಿ ಸೋಂಕು ಅಧಿಕವಾಗಿದೆ. ಬುಧವಾರ ಜಿಲ್ಲೆಯಲ್ಲಿ 422 ಹೊಸ ಪ್ರಕರಣ ಪತ್ತೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 33 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,881ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 377 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,31,474ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,618 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,63,117ಕ್ಕೆ ಏರಿಕೆಯಾಗಿದೆ. ಇನ್ನು 22,851 ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 1,67,237 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,826 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.09ಕ್ಕೆ ಇಳಿದಿದೆ.

See also  ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು