NewsKarnataka
Wednesday, October 27 2021

ಕರ್ನಾಟಕ

ಇತರ ರಾಜ್ಯದಲ್ಲಿ ಬಳಸದ ಲಸಿಕೆ ರಾಜ್ಯಕ್ಕೆ ನೀಡಿ ಎಂದು ಕೇಂದ್ರಕ್ಕೆ ಮನವಿ ಮಾಡಿದ ಬಿಎಸ್‌ವೈ

ಬೆಂಗಳೂರು: ರೆಮ್​ಡಿಸಿವಿರ್ ಕೊರತೆ ಇರುವ ಹಿನ್ನೆಲೆ ಇತರೆ ರಾಜ್ಯದಲ್ಲಿ ಬಳಕೆಯಾಗದೆ ಉಳಿದ ಲಸಿಕೆ ನೀಡಲು ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.ಅಲ್ಲದೆ, ಇಲಾಖೆ ವ್ಯಾಪ್ತಿಯಲ್ಲಿ 24 ಸಾವಿರ ಆಕ್ಸಿನೇಡೆಡ್ ಬೆಡ್​​​ 1,145 ಐಸಿಯು 2,019 ವೆಂಟಿಲೇಟರ್ ಬೆಡ್​​​ ಲಭ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.
ಕೊರೊನಾ ನಿಯಂತ್ರಣ ಹಿನ್ನೆಲೆ ರಾಜ್ಯಾದ್ಯಂತ ಜಾರಿ ಮಾಡಲಾದ ಲಾಕ್​ಡೌನ್ ಬಳಿಕ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಆಮ್ಲಜನಕ ಬೇಡಿಕೆ ಸರಿದೂಗಿಸಲು ಮೂರು ಅಂಶಗಳ ಕಾರ್ಯಕಂತ್ರ ರೂಪಿಸಲಾಗಿದೆ.ಅದರಂತೆ ಲಿಕ್ವಿಡ್ ಆಕ್ಸಿಜನ್ ಪೂರೈಕೆ ಹೆಚ್ಚಳ, ಆಕ್ಸಿಜನ್ ಜನರೇಟರ್ ಮೂಲಕ ಸ್ಥಳೀಯವಾಗಿ ಅಕ್ಸಿಜನ್ ಉತ್ಪಾದನೆ ಹೆಚ್ಚಳ ಹಾಗೂ ಆಕ್ಸಿಜನ್ ಸಿಲಿಂಡರ್ ಹೆಚ್ಚಾಗಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದಿದ್ದಾರೆ.18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು 3 ಕೋಟಿ ಡೋಸ್ ಖರೀದಿಗೆ ಬೇಡಿಕೆ ಇಟ್ಟಿದೆ.
ಹೆಚ್ಚುವರಿಯಾಗಿ 2ಕೋಟಿ ಡೋಸ್ ಪೂರೈಕೆಗೆ ಟೆಂಡರ್ ಕರೆಯಲಾಗಿದೆ. ಈವರೆಗೆ 8.94 ಲಕ್ಷ ಡೋಸ್ ಲಭ್ಯವಾಗಿದೆ ಎಂದಿದ್ದಾರೆ. ಡಿಸಿಎಂ ಅಶ್ವತ್ಥ ನಾರಾಯಣ, ಸಚಿವರಾದ ಆರ್ ಅಶೋಕ್​, ಸುಧಾಕರ್​ ಅರವಿಂದ್ ಲಿಂಬಾವಳಿ ತಮಗೆ ವಹಿಸಿರುವ ಜವಾಬ್ದಾರಿ ಹಾಗೂ ಸರ್ಕಾರದಿಂದ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!