News Kannada
Saturday, November 26 2022

ಕರ್ನಾಟಕ

ಜಾತಿ ಗಣತಿ ವರದಿ ಸಿದ್ದರಾಮಯ್ಯ ಹೇಳಿ ಬರೆಸಿದ ವರದಿ ; ಹೆಚ್‌ಡಿಕೆ ಆರೋಪ - 1 min read

Photo Credit :

ಬೆಂಗಳೂರು, ; ಕಾಂಗ್ರೆಸ್ ಅವಧಿಯಲ್ಲಿ ನಡೆಸಲಾದ ಜಾತಿ ಗಣತಿ ವರದಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿ ಬರೆಸಿರುವ ವರದಿ. ಅದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿಯಲ್ಲ. ಸಿದ್ದರಾಮಯ್ಯನವರ ವರದಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ತಾವು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ೧೮೦ ಕೋಟಿ ರೂ.ಗಳನ್ನು ಖರ್ಚು ಮಾಡಿ ಈ ವರದಿ ಬರೆಸಿದ್ದಾರೆ. ಹಿಂದಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಈ ವರದಿಗೆ ಠಸ್ಸೆ ಒಡೆದಿದ್ದಾರೆ ಅಷ್ಟೆ ಎಂದು ಅವರು ಹರಿಹಾಯ್ದರು.ಚನ್ನಪಟ್ಟಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಮಾಡಲು ಕೆಲಸವಿಲ್ಲ. ಸಮ್ಮಿಶ್ರ ಸರ್ಕಾರ ಇದ್ದಾಗ ಸಿದ್ದರಾಮಯ್ಯನವರೆ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದರು. ಒಂದು ದಿನವಾದರೂ ಸಮನ್ವಯ ಸಮಿತಿ ಸಭೆಯಲ್ಲಿ ಜಾತಿ ಗಣತಿ ವರದಿ ಸ್ವೀಕರಿಸಿ ಎಂದು ಸಿದ್ದರಾಮಯ್ಯ ಹೇಳಲಿಲ್ಲ. ಈಗ ಕುಮಾರಸ್ವಾಮಿ ವರದಿ ಸ್ವೀಕರಿಸಲಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಾತಿ ಗಣತಿ ವರದಿ ಸಿದ್ದವಾಗಿದೆ, ವರದಿ ನೀಡುತ್ತೇವೆ ಎಂದು ಯಾರೂ ಸಹ ನಾನು ಮುಖ್ಯಮಂತ್ರಿಯಾಗಿದ್ದಾಗ ನನ್ನ ಬಳಿ ಬಂದಿರಲಿಲ್ಲ, ನನ್ನ ಗಮನಕ್ಕೂ ತಂದಿರಲಿಲ್ಲ. ಚರ್ಚೆ ಮಾಡಲೂ ಇಲ್ಲ. ಈಗ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

See also  ಪ್ರಕೃತಿ ಚಿಕಿತ್ಸಾಲಯ ಕೇಂದ್ರಕ್ಕೆ ದಾಖಲಾದ ಸಿದ್ದರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು