News Kannada
Thursday, December 08 2022

ಕರ್ನಾಟಕ

ಐತಿಹಾಸಿಕ ದೇವಸ್ಥಾನಗಳಲ್ಲಿ ಯಾತ್ರಿ ನಿವಾಸ ನಿರ್ಮಾಣ : ಸಚಿವೆ ಜೊಲ್ಲೆ

Photo Credit :

ಬೆಂಗಳೂರು ; ಐತಿಹಾಸಿಕ ಹಾಗೂ ಸುಪ್ರಸಿದ್ದ ದೇವಸ್ಥಾನಗಳಿಗೆ ಅಪಾರ ಸಂಖ್ಯೆಯ ಭಕ್ತಾಧಿಗಳು ಆಗಮಿಸುತ್ತಿದ್ದು, ಯಾತ್ರಿ ನಿವಾಸ ಕೊರತೆ ಇರುವ ಕಡೆಗಳಲ್ಲಿ ಯಾತ್ರಿ ನಿವಾಸವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಮುಜರಾಯಿ, ಹಜ್‍ಮತ್ತು ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯಗಳಲ್ಲಿ ಸ್ವಚ್ಚತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಿ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು.
ಶ್ರೀಶೈಲ, ತಿರುಮಲ, ಪಂಡರಾಪುರ, ದಾನಮ್ಮದೇವಿ ಸೇರಿದಂತೆ ವಿವಿಧ ದೇವಾಲಯಗಳಿಗೆ ದೇವರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೋಗುತ್ತಾರೆ. ಕೆಲವರು ನಡೆದೇ ಹೋಗುತ್ತಾರೆ. ಇಂತಹ ದೇವಾಲಯಗಳ ಬಳಿ ನಿವೇಶನವಿದ್ದರೆ ಯಾತ್ರಿ ನಿವಾಸ ನಿರ್ಮಿಸುವ ಉದ್ದೇಶವಿದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ಮುಜರಾಯಿ ದೇವಾಲಯಗಳ ಜಾಗ ಅತಿಕ್ರಮಣವಾಗಿರುವ ಬಗ್ಗೆ ಸಮೀಕ್ಷೆ ನಡೆಸಿ ರಕ್ಷಣೆ ಮಾಡಲಾಗುವುದು. ರಾಜ್ಯದಲ್ಲಿ 34,563 ಮುಜರಾಯಿ ದೇವಾಲಯಗಳಿವೆ. 25 ಲಕ್ಷಕ್ಕಿಂತ ಹೆಚ್ಚಿನ ಆದಾಯವಿರುವ ದೇವಾಲಯಗಳನ್ನು ಎ ವರ್ಗಕ್ಕೂ, 25 ಲಕ್ಷಕ್ಕಿಂತ ಕಡಿಮೆ ಇರುವ ಹಾಗೂ 5 ಲಕ್ಷ ರೂ.ಗಿಂತ ಹೆಚ್ಚು ಆದಾಯವಿರುವ ದೇವಾಲಯಗಳನ್ನು ಬಿ ವರ್ಗ, 5ಲಕ್ಷ ರೂ.ಗಿಂತ ಕಡಿಮೆ ಆದಾಯವಿರುವ ದೇವಾಲಯಗಳನ್ನು ಸಿ ವರ್ಗದ ದೇವಾಲಯಗಳೆಂದು ವರ್ಗೀಕರಿಸಲಾಗಿದೆ.

See also  ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು