NewsKarnataka
Wednesday, December 08 2021

ಕರ್ನಾಟಕ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚಳ : ಒಂದೇ ತಿಂಗಳಲ್ಲಿ 200ಕ್ಕೂ ಹೆಚ್ಚು ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದರೆ ಇತ್ತ ಬ್ಲ್ಯಾಕ್ ಫಂಗಸ್ (ಮ್ಯೂಕೋರ್ಮೈಕೋಸಿಸ್) ಆತಂಕ ಸೃಷ್ಟಿಸುತ್ತಿದೆ.
ರಾಜ್ಯದಲ್ಲಿ ಒಟ್ಟು 3,836 ಮಂದಿಯಲ್ಲಿ ಬ್ಲ್ಯಾಕ್​ ಫಂಗಸ್ ಪತ್ತೆಯಾಗಿದೆ. ರಾಜಧಾನಿ ಬೆಂಗಳೂರು ಒಂದರಲ್ಲೇ 1,207 ಪ್ರಕರಣ ವರದಿಯಾಗಿದೆ. ಫಂಗಸ್​ನಿಂದಾಗಿ 441 ಸೋಂಕಿತರು ಮೃತಪಟ್ಟಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲೇ 149 ಮಂದಿ ಕೊನೆಯುಸಿರೆಳೆದಿದ್ದು, ಸಾವಿನ ಪ್ರಮಾಣದಲ್ಲಿ ಮೊದಲ ಸ್ಥಾನದಲ್ಲಿದೆ. ನಂತರ ಧಾರವಾಡದಲ್ಲಿ 40, ಬಳ್ಳಾರಿಯಲ್ಲಿ 28, ದಕ್ಷಿಣ ಕನ್ನಡದಲ್ಲಿ 25 ಮಂದಿ ಮೃತಪಟ್ಟಿದ್ದಾರೆ.   ರಾಜ್ಯದಲ್ಲಿ ದಿನಕ್ಕೆ ಸರಾಸರಿ 8 ಹೊಸ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗ್ತಿದ್ದು, ಕಳೆದ 33 ದಿನಗಳಲ್ಲಿ 285 ಹೊಸ ಪ್ರಕರಣಗಳು ಕಂಡುಬಂದಿದೆ. ಕೊರೊನಾ ನಡುವೆ ಬ್ಲ್ಯಾಕ್ ಫಂಗಸ್ ಸಂಖ್ಯೆ ಏರಿಕೆ ಆಗುತ್ತಿರುವುದು ಆತಂಕಕ್ಕೆ ಕಾರಣ.ಬ್ಲ್ಯಾಕ್ ಫಂಗಸ್​ ಹಾವಳಿಗೆ ಬೆಂಗಳೂರು ,ಧಾರವಾಡ,ವಿಜಯಪುರ,ಕಲಬುರಗಿ, ಮತ್ತು ಬಳ್ಳಾರಿ ಜಾಸ್ತಿ ಪ್ರಕರಣಗಳನ್ನು ದಾಖಲಿಸಿವೆ.
ಶಿಲೀಂಧ್ರ ಸೋಂಕು ಕಾಣಿಸಿಕೊಂಡವರಲ್ಲಿ ದೃಷ್ಟಿಹೀನತೆ ಕಾಡಲಿದ್ದು, ಆರಂಭದಲ್ಲಿ ಚಿಕಿತ್ಸೆ ಪಡೆಯದೇ ಇದ್ದರೆ ನಂತರದ ದಿನದಲ್ಲಿ ಮೆದುಳಿಗೆ ಸೋಂಕು ವ್ಯಾಪಿಸಿ ವ್ಯಕ್ತಿ ಸಾವನ್ನಪ್ಪುವ ಸಾಧ್ಯತೆ ಇರಲಿದೆ. ಸೋಂಕಿತ ವ್ಯಕ್ತಿ ಆಸ್ಪತ್ರೆಗೆ ದಾಖಲಾದಾಗ ಅಥವಾ ಡಿಸ್ಚಾರ್ಜ್ ಸಮಯದಲ್ಲಿಯಾದರೂ ಎಂಡೋಸ್ಕೋಪಿ ಮಾಡುವುದು ಒಳ್ಳೆಯದು ಎಂದು ತಜ್ಞರು ಶಿಫಾರಸು ಮಾಡುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!