ಬೆಂಗಳೂರು: ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನ ಕೆಲವು ಶಾಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಲಿದ್ದಾರೆ.
ಕೋವಿಡ್ ಮೂರನೇ ಅಲೆ ಆತಂಕದ ನಡುವೆಯೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಾಳೆಯಿಂದ ಶಾಲೆಗಳು ಆರಂಭವಾಗುತ್ತಿದ್ದು, ಮೊದಲ ಹಂತದಲ್ಲಿ 9ನೇ ತರಗತಿಯಿಂದ 12ನೇ ತರಗತಿವರೆಗೆ ಆರಂಭವಾಗಲಿದೆ.
ಶಾಲೆಗಳ ಆರಂಭಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈಗಾಗಲೇ ಇದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿಯನ್ನೂ ಹೊರಡಿಸಿದೆ. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಾನೂ ಶಾಲೆಗೆ ಹೋಗುತ್ತೇನೆಂದು ಹೇಳುವ ಮೂಲಕ ಮಕ್ಕಳು ಹಾಗೂ ಪೋಷಕರಲ್ಲಿರುವ ಆತಂಕವನ್ನು ಹೋಗಲಾಡಿಸುವ ಪ್ರಯತ್ನವನ್ನು ಮಾಡಿದ್ದಾರೆ.
ಶಾಲೆಗಳ ಆರಂಭ ಕುರಿತು ನಾವು ಎಷ್ಟು ಗಂಭೀರವಾಗಿದ್ದೇವೆಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಹೀಗಾಗಿ ಸ್ವತಃ ಮುಖ್ಯಮಂತ್ರಿಗಳೇ ಶಾಲೆಗಳಿಗೆ ಭೇಟಿ ನೀುಡತ್ತಿದ್ದಾರೆಂದು ಶಿಕ್ಷಣ ಸಚಿವ ನಾಗೇಶ್ ಅವರು ಹೇಳಿದ್ದಾರೆ.