ಬೆಂಗಳೂರು, ;ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಕೆಲವು ನಗರ ಸ್ಥಳೀಯ ಸಂಸ್ಥೆಗಳಿಗೆ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಇಂದು ಮುಕ್ತಾಯವಾಗಿದ್ದು, ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದ್ದು, ಉಮೇದುವಾರಿಕೆ ಸಲ್ಲಿಸಲು ಇಂದಿನವರೆಗೆ ಅವಕಾಶವಿತ್ತು. ಕೊನೆಯ ದಿನವಾದ್ದರಿಂದ ಇಂದು ಹೆಚ್ಚು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಸಂಜೆ ವೇಳೆಗೆ ಕ್ರಮಬದ್ಧವಾದ ಹಾಗೂ ತಿರಸ್ಕøತಗೊಂಡ ನಾಮಪತ್ರಗಳ ಪಟ್ಟಿಯನ್ನು ಆಯಾ ಚುನಾವಣಾಧಿಕಾರಿಗಳು ಪ್ರಕಟಿಸಲಿದ್ದಾರೆ. ಆ.26ರ ವರೆಗೆ ಉಮೇದುವಾರಿಕೆ ಹಿಂತೆಗೆದುಕೊಳ್ಳಲು ರಾಜ್ಯ ಚುನಾವಣಾ ಆಯೋಗ ಅವಕಾಶ ನೀಡಿದೆ. ಅಗತ್ಯವಿದ್ದರೆ ಸೆ.5ರಂದು ಮರು ಮತದಾನ ನಡೆಸಲಾಗುತ್ತದೆ. ಮತಗಳ ಎಣಿಕೆಯನ್ನು ಆಯಾ ತಾಲ್ಲೂಕಿನ ಕೇಂದ್ರ ಸ್ಥಳಗಳಲ್ಲಿ ಸೆ.6ರಂದು ನಡೆಸಲಾಗುತ್ತದೆ.