ಮೈಸೂರು: ಇಲ್ಲಿನ ಚಿನ್ನಾಭರಣ ಅಂಗಡಿಯೊಂದರಲ್ಲಿ 3 ದರೋಡೆಕೋರರ ತಂಡ ನುಗ್ಗಿ ಗುಂಡು ಹಾರಿಸಿ ಚಿನ್ನಾಭರಣ ಲೂಟಿ ಮಾಡಿ ಪರಾರಿ ಆಗಿದ್ದಾರೆ. ವಿದ್ಯಾರಣ್ಯಪುರಂನ ಚಿನ್ನದ ಅಂಗಡಿ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್ನಲ್ಲಿ ದರೋಡೆಕೋರರು ದಾಳಿ ನಡೆಸಿ ಚಿನ್ನವನ್ನು ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಈವೇಳೆ ತಡೆಯಲು ಯತ್ನಿಸಿದ ಅಂಗಡಿ ಮಾಲೀಕ ಧರ್ಮೇಂದ್ರ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ದರೋಡೆಕೋರರನ್ನು ತಡೆಯಲು ಯತ್ನಿಸಿದ ಚಂದ್ರು ಎಂಬಾತನಿಗೆ ಗುಂಡಿಕ್ಕಿದ ಪರಿಣಾಮ ಆತ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಸ್ಥಳಕ್ಕೆ ಡಿಸಿಪಿ ಗೀತಾ ಪ್ರಸನ್ನ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಷ್ಟು ಮೌಲ್ಯದ ಚಿನ್ನಾಭರಣ ಲೂಟಿಯಾಗಿದೆ ಎಂದು ತಿಳಿದು ಬಂದಿಲ್ಲ. ವಿದ್ಯಾರಣ್ಯಪುರಂ ಪೋಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.