ಬೆಳಗಾವಿ: ಸಪ್ಟೆಂಬರ್ 3 ರಂದು ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, 58 ವಾರ್ಡ್‌ಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಆಗಿದೆ. ಆದರೆ, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬೆಳಗಾವಿ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕಾಂಗ್ರೆಸ್‌ನವರಿಂದ ಹಣ ಪಡೆದು ಬಿಜೆಪಿ ಟಿಕೆಟ್ ಹಂಚಿಕೆ ಮಾಡಲಾಗಿದೆ. ಮೂಲ ಬಿಜೆಪಿ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿಲ್ಲವೆಂದು ಕೆಲವರು ಕಿಡಿಕಾರಿದ್ದಾರೆ. ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ನಗರ ಬಿಜೆಪಿ ಕಾರ್ಯಕರ್ತರಿಂದ ಅಸಮಾಧಾನ ಸ್ಫೋಟಗೊಂಡಿದೆ.
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ; ಬಿಜೆಪಿ ಕಾರ್ಯಕರ್ತರ ಅಸಮಾಧಾನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.