ಬೆಂಗಳೂರು: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಇವತ್ತಿನಿಂದಲೇ ಬಸ್ ಪಾಸ್‌ಗಳನ್ನು ಆನ್ ಲೈನ್ ಮೂಲಕ ವಿತರಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ವಿದ್ಯಾರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಿ, ಪಾಸ್ ಪಡೆದುಕೊಳ್ಳಬಹುದು ಎಂದು ಸುದ್ದಿಗಾರರಿಗೆ ತಿಳಿಸಿದರು. ವಿದ್ಯಾರ್ಥಿ ಪಾಸ್ ದರದಲ್ಲಿ ಏರಿಕೆ ಮಾಡಿಲ್ಲ ಎಂದೂ ಸ್ಪಷ್ಟ ಪಡಿಸಿದರು.