News Kannada
Tuesday, January 31 2023

ಕಲಬುರಗಿ

ದೇಶದಲ್ಲೇ ಮೊದಲ ಬಾರಿಗೆ ಎನ್ಇಪಿ ಜಾರಿಗೆ ತರುತ್ತಿರುವುದು ಹೆಮ್ಮೆಯ ‌ವಿಷಯ : ಡಾ.ಸಿ.ಎನ್. ಅಶ್ವತ್ಥನಾರಾಯಣ

Photo Credit :

ಕಲಬುರ್ಗಿ: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಜಾರಿಗೆ ತರುತ್ತಿರುವುದು ಹೆಮ್ಮೆಯ ‌ವಿಷಯವಾಗಿದೆ ಎಂದು ಉನ್ನತ ಶಿಕ್ಷಣ ‌ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಎನ್‌ಇಪಿ‌ ಕುರಿತ ವಿಚಾರ ಸಂಕಿರಣಕ್ಕೆ ಚಾಲನೆ ನೀಡುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

ಸುಮಾರು ಐದೂವರೆ ವರ್ಷಗಳಿಂದ ನೂತ‌ನ ಶಿಕ್ಷಣ ‌ನೀತಿ ತಯಾರಿಕೆ ಪ್ರಕ್ರಿಯೆ ನಡೆದಿತ್ತು. ಇದೀಗ ಅದು ಕಾರ್ಯರೂಪಕ್ಕೆ ಬಂದಿದೆ ಎಂದರು. ನಮ್ಮ ಕೆಲಸ ನಾವು ಮಾಡುತ್ತಾ ಹೋದೆವು. ಆ ಪ್ರಯತ್ನದಲ್ಲಿ ನಾವೇ ಮೊದಲ ಬಾರಿಗೆ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತಿದ್ದೇವೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕನಸನ್ನು ರಾಜ್ಯ ಸರ್ಕಾರ ನನಸು ಮಾಡುತ್ತಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಮ್ಮ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಹೊಸಪೇಟೆ ಶಾಸಕ ಆನಂದ ಸಿಂಗ್ ಅವರು ಮುನಿಸಿಕೊಂಡಿರುವುದನ್ನು ಗಮನಿಸಿ ಮುಖ್ಯಮಂತ್ರಿ ಸಿಂಗ್ ಅವರೊಂದಿಗೆ ಮಾತುಕತೆ ‌ನಡೆಸಿದ್ದಾರೆ ಎಂದರು.

See also  ಸಚಿವೆ ಶೋಭಾ ಎದುರು ಬಿಕ್ಕಿ ಬಿಕ್ಕಿ ಅತ್ತ ಬಿಜೆಪಿ ಕಾಯ೯ಕತೆ೯
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು