ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಸುನಂದಾ ಪಾಲನೇತ್ರ ಆಯ್ಕೆ ಆಗಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಇದೇ ಮೊದಲ ಬಾರಿಗೆ ಬಿಜೆಪಿ ಪಾಲಾಗಿದೆ. ಕಾಂಗ್ರೆಸ್, ಜೆಡಿಎಸ್ ಮೈತ್ರಿಯ ಪಾಲಿಕೆ ಮೇಯರ್ ಆಗಿದ್ದ ರುಕ್ಮಿಣಿ ಮಾದೇಗೌಡ ಸದಸ್ಯತ್ವ ರದ್ದಾದ ಹಿನ್ನೆಲೆ ಇಂದು ಚುನಾವಣೆ ನಡೆದಿದ್ದು, ಮೇಯರ್ ಪಟ್ಟ ಬಿಜೆಪಿಗೆ ಒಲಿದಿದೆ.
ಸುನಂದಾ ಪಾಲನೇತ್ರ ಅವರಿಗೆ 26 ಮತಗಳು ಸಿಕ್ಕಿವೆ. ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ 22 ಮತಗಳನ್ನು ಗಳಿಸಿದ್ದಾರೆ. ಆ ಮೂಲಕ ನಗರಪಾಲಿಕೆಯ ಮೇಯರ್ ಸ್ಥಾನವನ್ನು ಹಿಡಿಯಬೇಕೆಂದು ತೀವ್ರ ಪ್ರಯತ್ನ ನಡೆಸಿದ್ದ ಬಿಜೆಪಿ ಅದರಲ್ಲಿ ಯಶಸ್ವಿಯಾಗಿದೆ.
ನೂತನ ಮೇಯರ್ ಸುನಂದಾ ಅವರನ್ನು ಶಾಸಕ ಎಲ್.ನಾಗೇಂದ್ರ ಹಾಗೂ ಬಿಜೆಪಿಯ ನಗರಪಾಲಿಕೆ ಸದಸ್ಯರು ಅಭಿನಂದಿಸಿದರು.
ಸುನಂದಾ ಪಾಲನೇತ್ರ ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.