ಮೈಸೂರು: ‘ಮಸೀದಿಗಳಲ್ಲಿ ಶುಕ್ರವಾರ ಸಾಮೂಹಿಕ ನಮಾಜ್, ಚರ್ಚ್ಗಳಲ್ಲಿ ಭಾನುವಾರ ಪ್ರಾರ್ಥನೆ ನಡೆಯುತ್ತಿದ್ದರೆ ಗಣೇಶೋತ್ಸವಕ್ಕೂ ಅನುಮತಿ ನೀಡಬೇಕು’ ಎಂದು ಸಂಸದ ಪ್ರತಾಪಸಿಂಹ ಆಗ್ರಹಿಸಿದರು.
ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಆಚರಣೆಗೆ ಅವಕಾಶ ಮಾಡಿಕೊಡುತ್ತಾರೆ ಎಂಬ ಭರವಸೆ ಇದೆ’ ಎಂದರು.
‘ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ನಾನು ಹೇಳುತ್ತಿಲ್ಲ. ಕೊರೊನಾ ಮೂರನೇ ಅಲೆಯ ಭಯವಿದೆ. ಹೀಗಾಗಿ, ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಂಡು ಆಚರಿಸಲು ಅವಕಾಶ ಮಾಡಿಕೊಡಬೇಕು’ ಎಂದು ಹೇಳಿದರು.
ನಮಾಜ್ ನಡೆಯುತ್ತಿದ್ದರೆ ಗಣೇಶೋತ್ಸವಕ್ಕೂ ಅನುಮತಿ ನೀಡಿ: ಪ್ರತಾಪಸಿಂಹ - 1 min read
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.