ಕರ್ನಾಟಕ : ರಾಜ್ಯದಲ್ಲಿ ನಾಳೆಯಿಂದ (ಆ.28) ಆ.30ರವೆರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಈಗಾಗಲೇ ಬೆಂಗಳೂರಿನ 86 ಕೇಂದ್ರಗಳು ಸೇರಿದಂತೆ ರಾಜ್ಯದ ಒಟ್ಟು 530 ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಲಾಗಿದ್ದು, ಕೋವಿಡ್ ಮಾರ್ಗಸೂಚಿ ಅನುಸಾರ ಪರೀಕ್ಷೆ ನಡೆಯಲಿದೆ.
ವಿದ್ಯಾರ್ಥಿಗಳು ಪರೀಕ್ಷೆ ವೇಳ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
ಆ.28: ಜೀವಶಾಸ್ತ್ರ ಮತ್ತು ಗಣಿತ. ಆ.29: ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ. ಆ.30: ಹೊರನಾಡು & ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ.