ಬೆಂಗಳೂರು, ; ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಇಳಿಕೆಯಾಗಿದೆ. ಚೇತರಿಕೆ ತುಸು ಏರಿಕೆಯಾಗಿದೆ.ಬಾಗಲಕೋಟೆ,ಬೀದರ್,ರಾಯಚೂರು,ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.64 ಏರಿಕೆಯಾಗಿದೆ.ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ 2.06 ಕ್ಕೆ ಹೆಚ್ಚಳವಾಗಿದೆ.ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,300 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿಂದು 1,213 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 25 ಮಂದಿ ಸಾವನ್ನಪ್ಪಿದ್ದಾರೆ ಜೊತೆ 1,206 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.
ಹೊಸದಾಗಿ ದಾಖಲಾಗಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,43,463 ಕ್ಕೆ ಏರಿಕೆಯಾಗಿದೆ ಜೊತೆಗೆ ಚೇತರಿಸಿಕೊಂಡವರ ಸಂಖ್ಯೆ 28,86,906ಕ್ಕೆ ಹೆಚ್ಚಳವಾಗಿದೆ.
ಸೋಂಕಿನಿಂದ ಒಟ್ಟಾರೆ ಸಾವನ್ನಪ್ಪಿದವರ ಸಂಖ್ಯೆ 37,231 ಕ್ಕೆ ಹೆಚ್ಚಳವಾಗಿದೆ.
ರಾಜ್ಯದ 5 ಜಿಲ್ಲೆಯಲ್ಲಿ ಕೊರೊನಾ ಸೋಂಕು ಶೂನ್ಯ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.