ಹೊನ್ನಾವರ: ಮೆಕ್ಕೆ ಜೋಳದ ಚೀಲಗಳನ್ನು ತುಂಬಿ ಸಾಗುತ್ತಿದ್ದ ಲಾರಿ ಇಲ್ಲಿನ ಮುಗ್ವಾ ಪಂಚಾಯಿತಿ ವ್ಯಾಪ್ತಿಯ ಬಾಳೆಗದ್ದೆ ಕ್ರಾಸ್ ಬಳಿ ಬಳಿ ಪಲ್ಟಿಯಾಗಿ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.
ಚಾಲಕನ್ನನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಳೆಯಲ್ಲಿ ಮೆಕ್ಕಿಜೋಳದ ಚೀಲಗಳು ಒದ್ದೆಯಾಗುವ ಸಾಧ್ಯತೆ ಇರುವುದರಿಂದ ರಕ್ಷಿಸುವ ವ್ಯವಸ್ಥೆ ಮಾಡಲಾಗಿದೆ.
ಇತ್ತೀಚಿನ ದಿನಗಳಲ್ಲಿ ಬಾಳೆಗದ್ದೆ ತಿರುವಿನಲ್ಲಿ ವಾಹನಗಳು ಪಲ್ಟಿಯಾಗುತ್ತಿರುವ ಘಟನೆಗಳು ಮೇಲಿಂದ ಮೇಲೆ ಸಂಭವಿಸುತ್ತಿದ್ದು ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಹೊನ್ನಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.