ಕರ್ನಾಟಕ : ಕರ್ನಾಟಕದ ಕನಸಿನ ಮೇಕೆದಾಟು ಯೋಜನೆಗೆ ತಮಿಳುನಾಡು ಮತ್ತೆ ಅಡ್ಡಿ ಹಾಕಿದೆ. ಕಾನೂನಿನ ಮೂಲಕ ಕ್ಯಾತೆ ತೆಗೆದಿರುವ ತಮಿಳುನಾಡು, ಈ ಯೋಜನೆಗೆ ತಡೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಯೋಜನೆಗೆ ತಡೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈಗಾಗಲೇ ಕರ್ನಾಟ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಡಿಪಿಆರ್ (ಸಮಗ್ರ ಯೋಜನೆಯ) ವರದಿಯನ್ನ ತಿರಸ್ಕರಿಸುವಂತೆ ತಮಿಳುನಾಡು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದೆ.
ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಬೇಕು ಅಂತ ಈಗಾಗಲೇ ರಾಜ್ಯ ಸರ್ಕಾರ ಹಲವು ಸುತ್ತಿನ ಮಾತುಕತೆ ನಡೆಸುತ್ತಿದೆ.
ಇದರ ಮಧ್ಯೆ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ತನ್ನ ವಿರೋಧ ಇದೆ ಅಂತಾ ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಿದೆ. ಇದೀಗ ಕಾನೂನು ಹೋರಾಟಕ್ಕೆ ಮುಂದಾಗಿದೆ.