News Kannada
Thursday, December 01 2022

ಕರ್ನಾಟಕ

ಬಿಜೆಪಿ ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲ್ಲ : ಅರುಣ್ ಸಿಂಗ್

Photo Credit :

ಮೈಸೂರು, ;ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲ್ಲ. ಭಾರತೀಯ ಜನತಾ ಪಕ್ಷ ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲ್ಲ. ಜೆಡಿಎಸ್ ಮುಳುಗುತ್ತಿದೆ, ಬಿಜೆಪಿ ಬೆಳೆಯುತ್ತಿದೆ ಎಂದು ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಸಭಾ ಸದಸ್ಯ ಅರುಣ್ ಸಿಂಗ್ ಹೇಳಿದರು.
ಮೈಸೂರು ಪ್ರವಾಸದಲ್ಲಿರುವ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ನಮ್ಮ ಸಂಕಲ್ಪ. ಜೆಡಿಎಸ್, ಕಾಂಗ್ರೆಸ್ ಎರಡೂ ಸರ್ಕಾರಗಳನ್ನು ಜನತೆ ನೋಡಿದ್ದಾರೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಮ್ಮದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ. ಬಿ.ಎಸ್.ಯಡಿಯೂರಪ್ಪ ಓರ್ವ ಹಿರಿಯ ನಾಯಕ. ಅವರಿಗೆ ಸಂಘಟನೆ ಬಗ್ಗೆ ಅನುಭವ ಇದೆ. ಅವರ ಅನುಭವವನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ. ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಪರಿಪೂರ್ಣ ಕೆಲಸ ಮಾಡುತ್ತಿದೆ. ಹಳೇ ಮೈಸೂರು ಭಾಗದಲ್ಲಿ ದಿನ‌ ದಿನಕ್ಕೂ ಸಂಘಟನೆ‌ ಹೆಚ್ಚಾಗುತ್ತಿದೆ ಎಂದರು.
ಈ ಭಾಗದಲ್ಲೂ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ. ಇಬ್ಬರು ಸಚಿವರು ಖಾತೆಯನ್ನು ಸ್ವೀಕಾರ ಮಾಡಿದ್ದಾರೆ. ಖಾತೆ ಹಂಚಿಕೆ ಸಿಎಂ ಪರಮಾಧಿಕಾರ. ಅದರಲ್ಲಿ ನಮ್ಮ ಪಾತ್ರ ಇರುವುದಿಲ್ಲ. ಖಾತೆಗಳು ಹಂಚಿಕೆಯಾಗಿ ಎಲ್ಲ ಸಚಿವರು ಕೆಲಸ ಮಾಡುತ್ತಿದ್ದಾರೆ. ಈ‌ ಬಗ್ಗೆ ಯಾವುದೇ ಒತ್ತಡ ಇಲ್ಲ ಎಂದು ತಿಳಿಸಿದರು.

 

See also  ಕಾಂಗ್ರೆಸ್ ಒಗ್ಗಟಿನ ಬಗ್ಗೆ‌ ಮತ್ತೆ ಚರ್ಚೆ ಆರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು