News Kannada
Tuesday, December 06 2022

ಕರ್ನಾಟಕ

ಮೂರು ಮಹಾನಗರ ಪಾಲಿಕೆಗಳ ಚುನಾವಣೆ: ಮತದಾನ ಆರಂಭ

Photo Credit :

ಮಂಗಳೂರು: ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣಾ ಮತದಾನ ಆರಂಭವಾಗಿದ್ದು, ಸರತಿ ಸಾಲಲ್ಲಿ ನಿಂತು ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಬೆಳಗ್ಗೆ 7 ಗಂಟೆಯಿಂದಲೇ 3 ಮಹಾನಗರ ಪಾಲಿಕೆಗಳಿಗೆ ಮತದಾನ ಆರಂಭವಾಗಿದೆ. ಕೊವಿಡ್ ಮಾರ್ಗಸೂಚಿ ಪಾಲಿಸಿ ಪಾಲಿಕೆಗಳ ಚುನಾವಣೆ ನಡೆಯುತ್ತಿದೆ. ಸೆಪ್ಟೆಂಬರ್ 6ರಂದು ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಬೆಳಗಾವಿ ಪಾಲಿಕೆಯ 58 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದ್ದು, ಪಾಲಿಕೆ ಚುನಾವಣಾ ಕಣದಲ್ಲಿ 385 ಅಭ್ಯರ್ಥಿಗಳಿದ್ದಾರೆ. ಒಟ್ಟು 4,28,364 ಮತದಾರರಿದ್ದು, ಮತದಾನಕ್ಕಾಗಿ ಒಟ್ಟು 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 58 ವಾರ್ಡ್‌ಗಳ ಪೈಕಿ 55ರಲ್ಲಿ ಬಿಜೆಪಿ, 45ರಲ್ಲಿ ಕಾಂಗ್ರೆಸ್, 11 ವಾರ್ಡ್‌ಗಳಲ್ಲಿ ಜೆಡಿಎಸ್, 21ರಲ್ಲಿ ಎಂಇಎಸ್, 27 ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧೆ ನಡೆಸಿತ್ತಿದ್ದಾರೆ.

ಕಲಬುರಗಿ ಪಾಲಿಕೆಯ 55 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದೆ. ಪಾಲಿಕೆ ಚುನಾವಣಾ ಕಣದಲ್ಲಿ 300 ಅಭ್ಯರ್ಥಿಗಳಿದ್ದಾರೆ. ಇಲ್ಲಿ 5,19,464 ಮತದಾರರಿದ್ದು, 55 ವಾರ್ಡ್‌ಗಳ ಪೈಕಿ 47ರಲ್ಲಿ ಬಿಜೆಪಿ, 55ರಲ್ಲಿ ಕಾಂಗ್ರೆಸ್, 45 ವಾರ್ಡ್‌ಗಳಲ್ಲಿ ಜೆಡಿಎಸ್, 20ರಲ್ಲಿ ಎಐಎಂಐಎಂ, 26 ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆಯ 82 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಕಣದಲ್ಲಿ 420 ಅಭ್ಯರ್ಥಿಗಳಿದ್ದಾರೆ. ಇಲ್ಲಿ 8,11,632 ಮತದಾರರಿದ್ದು, 82 ವಾರ್ಡ್‌ಗಳ ಪೈಕಿ 82ರಲ್ಲಿ ಬಿಜೆಪಿ, 65ರಲ್ಲಿ ಕಾಂಗ್ರೆಸ್, 49 ವಾರ್ಡ್‌ಗಳಲ್ಲಿ ಜೆಡಿಎಸ್, 11ರಲ್ಲಿ ಎಐಎಂಐಎಂ, 41 ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು, 122 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಸ್ಪರ್ಧೆ ನಡೆಸುತ್ತಿದ್ದಾರೆ.

See also  ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ : ಎಸ್. ಟಿ. ಸೂಮಶೇಖರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು