News Kannada
Sunday, August 14 2022

ಬೆಂಗಳೂರು

ಕೋವಿಡ್-19 ಪೀಡಿತ ಬಡವರಿಗೆ ನೆರವಾಗಲು ವಿಶೇಷ ಕಾರ್ಯಕ್ರಮವೊಂದನ್ನು ರೂಪಿಸಲಿದೆ : ಬಸವರಾಜ ಬೊಮ್ಮಾಯಿ - 1 min read

ಬೆಂಗಳೂರು : ಕೋವಿಡ್-19 ಪೀಡಿತ ಬಡವರಿಗೆ ನೆರವಾಗಲು ರಾಜ್ಯ ಸರ್ಕಾರ ಶೀಘ್ರದಲ್ಲೇ ವಿಶೇಷ ಕಾರ್ಯಕ್ರಮವೊಂದನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗವು ಅಪಾರ ಸಂಖ್ಯೆಯ ಜನರ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರಿದೆ, ಅನೇಕ ಮಕ್ಕಳು ತಂದೆ ತಾಯಿ ಕಳೆದುಕೊಂಡು ಅನಾಥರಾಗಿದ್ದಾರೆ, ಅನೇಕ ಕುಟುಂಬಗಳು ತಮ್ಮ ಮಕ್ಕಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಈ ಎಲ್ಲಾ ಜನರಿಗೂ ಸಾಮಾಜಿಕ ಭದ್ರತೆ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕೋವಿಡ್ ಪೀಡಿತ ಕುಟುಂಬಗಳಿಗೆ ನೆರವು ನೀಡಲು ಹಿಂದಿನ ಬಿಎಸ್ ಯಡಿಯೂರಪ್ಪ ಸರ್ಕಾರ 1 ಲಕ್ಷ ರೂ. ಆರ್ಥಿಕ ನೆರವನ್ನು ಘೋಷಿಸಿತ್ತು, ಅವರ ಬ್ಯಾಂಕ್ ಖಾತೆಗಳಿಗೆ ನೆರವಾಗಿ ಹಣವನ್ನು ಪಾವತಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.

ಈ ಹಿಂದೆ ಘೋಷಿಸಲಾದ ಆರ್ಥಿಕ ನೆರವಿನ ಜೊತೆಗೆ ಮಕ್ಕಳು ಶಿಕ್ಷಣ ಮುಂದುವರೆಸಲು, ಅವರ ಆರೋಗ್ಯದ ಆರೈಕೆ ಮತ್ತು ಅವರು ಇತರರ ಮೇಲೆ ಅವಲಂಬಿತರಾಗದೆ ಮಾಡಲು ಸರ್ಕಾರ ಕಾರ್ಯಕ್ರಮವೊಂದನ್ನು ರೂಪಿಸಲಿದೆ ಎಂದು ಖಾಸಗಿ ಚಾನಲ್ ವೊಂದರ ಚರ್ಚೆಯಲ್ಲಿ ಬೊಮ್ಮಾಯಿ ತಿಳಿಸಿದರು.

ಸಂಬಂಧಿತ ಇಲಾಖೆಗಳಿಂದ ಮಾಹಿತಿಯನ್ನು ಪಡೆದ ನಂತರ ಶೀಘ್ರದಲ್ಲೇ ಹೊಸ ಕಾರ್ಯಕ್ರಮದ ವಿವರಗಳನ್ನು ಪ್ರಕಟಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯದ ಮೂಲಗಳು ಹೇಳಿವೆ.

See also  ಹಳ್ಳಕ್ಕೆ ಬಿದ್ದ ಬೈಕ್: ಸವಾರ ದುರ್ಮರಣ  
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು