News Kannada
Friday, September 30 2022

ಕರ್ನಾಟಕ

ವಿಜಯನಗರ: ವಿಜಯನಗರ ಜಿಲ್ಲೆ ಅಧಿಕೃತವಾಗಿ ಅ.2ರಂದು ಉದ್ಘಾಟನೆ - 1 min read

Photo Credit :

ವಿಜಯನಗರ: ನೂತನ ವಿಜಯನಗರ ಜಿಲ್ಲೆ ಅಧಿಕೃತವಾಗಿ ಅ.2ರಂದು ಉದ್ಘಾಟನೆಯಾಗಲಿದೆ. ಅ.02 ಮತ್ತು 03ರಂದು ಎರಡು ದಿನಗಳ ಕಾಲ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಸಚಿವರು ಉಪಸ್ಥಿತರಿರಲಿದ್ದಾರೆ ಎಂದು ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ತ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಜೃಂಭಣೆ ಮತ್ತು ಸರಳ ಎರಡನ್ನು ಗಮನದಲ್ಲಿಟ್ಟುಕೊಂಡು ವೈಭವದ ವಿಜಯನಗರ ಜಿಲ್ಲೆಗೆ ಚಾಲನೆ ನೀಡಲಾಗುವುದು. ಇದಕ್ಕಾಗಿ ಬೃಹತ್ ವೇದಿಕೆ ಸಿದ್ದಪಡಿಸಲಾಗುತ್ತಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಬಂಧಿಸಿದ ಎಲ್ಲ ಅಗತ್ಯ ಸಿದ್ಧತಾ ಕಾರ್ಯಗಳು ನಾಳೆಯಿಂದ ನಗರದಲ್ಲಿ ನಡೆಯಲಿವೆ, ಇದಕ್ಕಾಗಿ ತಂಡಗಳು ಬರಲಿವೆ ಎಂದು ತಿಸಿದರು.

ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆಗೆ ಚಾಲನೆ ನೀಡುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಿದ್ದಾರೆ. ಜಿಲ್ಲೆ ಕಾರ್ಯಾರಂಭ ಮಾಡುವ ಸಂದರ್ಭದಲ್ಲಿ ಅನೇಕ ಸವಾಲುಗಳಿರುತ್ತವೆ. ಕಚೇರಿಗಳ ಕಾರ್ಯಾರಂಭ ಮಾಡುವುದು,ಯುವ ಮತ್ತು ಉತ್ಸಾಹಿ ಹಾಗೂ ಅನುಭವಿಗಳ ಅಧಿಕಾರಿಗಳನ್ನು ಕರೆತರುವುದು. ಈ ಭಾಗದ ಜನರು ವಿವಿಧ ಸರಕಾರಿ ಸೌಲಭ್ಯಗಳಿಗೆ ಬಳ್ಳಾರಿಗೆ ಅಲೆದಾಡುವುದನ್ನು ತಪ್ಪಿಸಿ;ಎಲ್ಲ ಸೌಲಭ್ಯಗಳನ್ನು ವಿಜಯನಗರದಲ್ಲಿ ಸಿಗುವಂತೆ ನೋಡಿಕೊಳ್ಳುವುದು. ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳು ಆರಂಭ ಮಾಡುವ ಸಂದರ್ಭದಲ್ಲಾದ ಲೋಪಗಳನ್ನು ಗಮನದಲ್ಲಿಟ್ಟುಕೊಂಡು ಈ ಜಿಲ್ಲೆಯಲ್ಲಿ ಆ ರೀತಿಯ ಸಮಸ್ಯೆಗಳಾಗದಂತೆ ಜಿಲ್ಲೆಯನ್ನು ಕಟ್ಟಲಾಗುವುದು ಮತ್ತು ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದರು.

ಟಿಎಸ್‍ಪಿ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗುತ್ತಿರುವ ಜಿಲ್ಲಾಡಳಿತದ ಕಟ್ಟಡ 6 ಕೋಟಿ ರೂ.ವೆಚ್ಚದಲ್ಲಿ ನವೀಕರಣಗೊಳ್ಳುತ್ತಿದ್ದು, ಈಗಾಗಲೇ 3 ಕೋಟಿ ರೂ.ಬಿಡುಗಡೆ ಮಾಡಲಾಗಿದೆ. ಕಾರಿಗನೂರ ಬಳಿಯ ಇಎಸ್‍ಐ ಕಟ್ಟಡದಲ್ಲಿ ಎಸ್ಪಿ ಕಚೇರಿ ಸ್ಥಾಪಿಸಲಾಗುತ್ತಿದೆ ಎಂದು ಅವರು ವಿವರಿಸಿದರು. ಟಿಎಸ್‍ಪಿ ಕಚೇರಿ ಆವರಣದಲ್ಲಿಯೇ 35 ಎಕರೆ ವಿಶಾಲ ಜಾಗದಲ್ಲಿ ಮೆಡಿಸಿಟಿ ಸ್ಥಾಪಿಸಲಾಗುತ್ತಿದೆ, ಇದರಲ್ಲಿ 110 ಕೋಟಿ ವೆಚ್ಚದ 250 ಹಾಸಿಗೆ ಆಸ್ಪತ್ರೆ,ಮೆಡಿಕಲ್ ಕಾಲೇಜು, ನರ್ಸಿಂಗ್ ಕಾಲೇಜುಗಳಿರಲಿವೆ ಎಂದರು.

ಎಲ್ಲರ ಸಮ್ಮತಿ ಇದ್ದರೇ ಮಹಾನಗರ ಪಾಲಿಕೆ: ಜನರಿಗಾಗಿಯೇ ಹೊಸಪೇಟೆ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ. ಹೊಸಪೇಟೆ ನಗರಸಭೆ ಮಹಾನಗರ ಪಾಲಿಕೆಯಾಗಿ ಪರಿವರ್ತನೆಯಾದರೇ ಅಭಿವೃದ್ಧಿಗೆ ಅನುದಾನ ಬರುತ್ತದೆ. ಸಾಕಷ್ಟು ಪ್ರಮಾಣದ ಅಭಿವೃದ್ಧಿಯಾಗುತ್ತದೆ ಎಂಬ ಉದ್ದೇಶದಿಂದ ಕರಡು ಸಿದ್ಧಪಡಿಸಲಾಗುತ್ತಿದೆ ಎಂದರು.

ಹಂಪಿ ಉತ್ಸವವನ್ನು ಒಂದು ದಿನ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ಅಶೋಕ ಜೀರೆ, ವಿಜಯನಗರ ಜಿಲ್ಲೆಯ ವಿಶೇಷಾಧಿಕಾರಿಗಳು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಆಯುಕ್ತರಾದ ಅನಿರುದ್ಧ ಶ್ರವಣ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ,ಸಹಾಯಕ ಆಯುಕ್ತ ಸಿದ್ಧರಾಮೇಶ್ವರ ಇತರರು ಇದ್ದರು.

See also  ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು