NewsKarnataka
Sunday, October 24 2021

ಕರ್ನಾಟಕ

ರಾಜ್ಯದಲ್ಲಿ ಹೆಚ್ಚಿದ ಡೆಂಘಿ ಪ್ರಕರಣ; 3,572 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೇವಲ ಒಂದು ವಾರದಲ್ಲಿ 293 ಜನರಲ್ಲಿ ಡೆಂಘಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಸಂಖ್ಯೆ 3,572ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 540, ಕಲಬುರ್ಗಿಯಲ್ಲಿ 321, ಉಡುಪಿ 312, ಶಿವಮೊಗ್ಗ 260, ದಕ್ಷಿಣ ಕನ್ನಡ 192, ಕೊಪ್ಪಳದಲ್ಲಿ 175 ಜನರಲ್ಲಿ ಡೆಂಘಿ ಪ್ರಕರಣ ಪತ್ತೆಯಾಗಿದೆ.ಕೊರೊನಾ ಮೂರನೇ ಅಲೆ ಆತಂಕದ ನಡುವೆ ಡೆಂಘ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.ಈ ನಡುವೆ ಡೆಂಘಿ ಪ್ರಕರಣಗಳ ಜೊತೆ ಚಿಕೂನ್ ಗುನ್ಯಾ ಪ್ರಕರಣಗಳು ಕೂಡ ಕಂಡುಬರುತ್ತಿದ್ದು, ರಾಜ್ಯದಲ್ಲಿ 1,187 ಜನರು ಚಿಕೂನ್ ಗುನ್ಯಾದಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!