NewsKarnataka
Wednesday, November 24 2021

ಬೆಂಗಳೂರು

ಇಂದಿನಿಂದ 1ರಿಂದ 5ನೇ ತರಗತಿ ಆರಂಭ

ಬೆಂಗಳೂರು: ಕೋವಿಡ್ ಕಾರಣದಿಂದ ಮುಚ್ಚಲಾಗಿದ್ದ 1 ರಿಂದ 5ನೇ ತರಗತಿ ಶಾಲೆಗಳು ಇಂದಿನಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗುತ್ತಿವೆ.

ಸದ್ಯ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನಿಂದ ಮಕ್ಕಳನ್ನ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಇನ್ನು ಕೆಲವು ಕೋವಿಡ್ ನಿಯಮದಂತೆ ತರಗತಿಗಳು ಆರಂಭವಾಗಲಿವೆ.

ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ ಸರ್ಕಾರ ಶಾಲೆಗಳಿಗೆ ಅವಕಾಶ ಕೊಟ್ಟಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ತೆರೆಯಬೇಕು. ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಛತಾ ಕಾರ್ಯ, ಸ್ಯಾನಿಟೈಸರ್​ಗೆ ಅವಕಾಶ ನೀಡಬೇಕು.

ಇನ್ನು ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ ನೀಡಲಾಗಿದೆ. ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ಬೇಕು. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ದೃಢೀಕರಿಸಬೇಕು. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.

ಅಲ್ಲದೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ತರಗತಿಗೂ ಅವಕಾಶ ನೀಡಲಾಗಿದೆ. 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು. ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ ನೀಡಲಾಗಿದೆ.

ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ನವೆಂಬರ್ ಎರಡರಿಂದ ಶನಿವಾರ ಬೆಳಗ್ಗೆ 8 ರಿಂದ 11.40 ರ ವರೆಗೆ ಮಾತ್ರ ತರಗತಿ ನಡೆಯುತ್ತದೆ.

ಮತ್ತೊಂದು ಪ್ರಮುಖ ಅಂಶ ಅಂದ್ರೆ ಯಾವುದೇ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತೆರೆಯಲು ಅವಕಾಶ ನೀಡಿಲ್ಲ.ಹಾಗೂ 25 ರಿಂದ ನವೆಂಬರ್ 2ರವರೆಗೂ ಅರ್ಧ ದಿನ ಮಾತ್ರ ತರಗತಿ, ನವೆಂಬರ್ 2 ರಿಂದ ಪೂರ್ತಿ ದಿನ ತರಗತಿ ನಡೆಸಲು ಸೂಚನೆ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!