News Kannada
Tuesday, September 27 2022

ಬೆಂಗಳೂರು

ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - 1 min read

Photo Credit :

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮುಲಾಜಿಲ್ಲದೇ ಬಲಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಮುಲಾಜಿಲ್ಲದೆ ಕ್ರಮ ಜರಗಿಸಲಾಗುವುದು ಎಂದರು.

ನಮ್ಮ ಸರಕಾರ ಈ ವಿಚಾರದಲ್ಲಿ ಬಹಳ ಮುಕ್ತವಾಗಿದೆ. ಈ ಪ್ರಕರಣವನ್ನು ಬಯಲಿಗೆಳೆದವರೇ ನಾವು. ತನಿಖೆ ಮಾಡಿದ್ದು, ಇ.ಡಿ. ಮತ್ತು ಸಿಬಿಐ ಗೆ ಶಿಫಾರಸ್ಸು ಮಾಡಿದ್ದು ನಮ್ಮ ಸರಕಾರ. ಇ.ಡಿ.ಯಿಂದ ಈ ಬಗ್ಗೆ ತನಿಖೆ ನಡೆಯುತ್ತಿದೆ. ಸಿಬಿಐ ಇಂಟರ್ ಪೋಲ್ ಗೂ ಸಹ ವಹಿಸಲಾಗಿದೆ. ಅವರು ಕೋರಿದ ಅಗತ್ಯ ಮಾಹಿತಿಯನ್ನು ಒದಗಿಸಲಾಗಿದೆ ಎಂದು ಹೇಳಿದರು.

ಈ ಪ್ರಕರಣದಲ್ಲಿ ರಾಷ್ಟ್ರಕ್ಕೆ, ರಾಜ್ಯಕ್ಕೆ ಹಾಗೂ ವ್ಯಕ್ತಿಗಳಿಗೆ ಮೋಸವಾಗಿದ್ದರೆ, ಮೋಸ ಮಾಡಿದವರ ಮೇಲೆ ಮುಲಾಜಿಲ್ಲದೆ ಕ್ರಮ ಜರಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಆರೋಪಿ ಬಿಟ್ಟುಕೊಟ್ಟವರಿಂದ ಪಾಠ ಬೇಕಿಲ್ಲ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕೇಳಿರುವ ಆರು ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. 2016ರಿಂದ ಪ್ರಕರಣಕ್ಕೆ ಕರ್ನಾಟಕದೊಂದಿಗೆ ಸಂಬಂಧ ಇರುವುದಾದರೆ, ಅವರ ಸರಕಾರ ತನಿಖೆ ಏಕೆ ಕೈಗೊಳ್ಳಲಿಲ್ಲ? ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳು ಹಾಗೂ ಸಚಿವರು ಯಾಕೆ ಗಮನ ಹರಿಸಲಿಲ್ಲ? ಆರೋಪಿ ಶ್ರೀಕೃಷ್ಣನನ್ನು ಬಂಧಿಸಿ, ಬಿಟ್ಟು ಕಳುಹಿಸಲಾಯಿತು. ನಿರೀಕ್ಷಣಾ ಜಾಮೀನು ಪಡೆದಾಗಲೂ ವಿಚಾರಣೆಗೆ ಅವಕಾಶವಿತ್ತು. ಮುಕ್ತವಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಬಿಟ್ಟು ನಮ್ಮನ್ನು ಎಕೆ ಪ್ರಶ್ನಿಸುತ್ತಿದ್ದಾರೆ ಎಂದು ಕೇಳಿದ ಸಿಎಂ, ಆರೋಪಿಯನ್ನು ಬಿಟ್ಟುಕೊಟ್ಟವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಟೀಕಿಸಿದರು.

ಆಧಾರರಹಿತ ಆರೋಪಗಳನ್ನು ಮಾಡುವ ಬದಲು, ಸಾಕ್ಷ್ಯಾಧಾರಗಳನ್ನು ತನಿಖೆ ಮಾಡುತ್ತಿರುವ ಇಡಿಗೆ ಒದಗಿಸಲಿ ಕೂಡಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಆರೋಪ ಚಿಂತನೆಯ ದಿವಾಳಿತನ

ಟ್ವಿಟ್ಟರ್ ಹ್ಯಾಂಡಲ್ ಆಧಾರದ ಮೇಲೆ ವಿಚಾರಗಳನ್ನು ಪ್ರಸ್ತಾಪಿಸುತ್ತಾರೆ ಎಂದರೆ, ಅದು ಸುರ್ಜೆವಾಲಾ ಅವರ ಚಿಂತನೆಯ ದಿವಾಳಿತನ. ರಾಷ್ಟ್ರೀಯ ಪಕ್ಷದ ವಕ್ತಾರರೊಬ್ಬರಿಗೆ ಈ ರೀತಿಯ ಆಧಾರರಹಿತ ಆರೋಪಗಳನ್ನು ಮಾಡುವುದು ಶೋಭಿಸುವುದಿಲ್ಲ. ಸಾಂದರ್ಭಿಕ ಪುರಾವೆಗಳನ್ನು ಇಟ್ಟುಕೊಂಡು ಮಾತನಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಸಿದರು.

ವಶಪಡಿಸಿಕೊಂಡಿರುವ ಬಿಟ್ ಕಾಯಿನ್ ಬಗ್ಗೆ ಬಹಳ ಗೊಂದಲವಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಆರೋಪಿ ಶ್ರೀಕೃಷ್ಣ ತನ್ನ ಖಾತೆ ಎಂದು ಯಾವುದೋ ಎಕ್ಸ್ ಚೇಂಜ್ ಖಾತೆಯನ್ನು ನೀಡಿದ್ದಾನೆ ಎಂದು ತಿಳಿಸಿದರು.

See also  100 ದಿನ ಪೂರೈಸಿದ ಸಂಭ್ರಮದಲ್ಲಿ ಬೊಮ್ಮಾಯಿ ಸರ್ಕಾರ: ಶತಕದ ಸಾಧನೆ ಪುಸ್ತಕ ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು