NewsKarnataka
Wednesday, January 26 2022

ಬೆಂಗಳೂರು

ರಾಜ್ಯದ ಒಳನಾಡಿನ 5 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ

ಬೆಂಗಳೂರು: ಶ್ರೀಲಂಕಾ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣ ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನ.28ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಎರಡು ದಿನಗಳಿಂದ ಮಳೆ ತಗ್ಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಬೆಳಗಾವಿ ಹಾಗೂ ಧಾರವಾಡದಲ್ಲಿ ಶನಿವಾರ ತಲಾ 14 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

‘ನ. 29ರ ವೇಳೆಗೆ ಬಂಗಾಳ ಕೊಲ್ಲಿ ಯಲ್ಲಿ ವಾಯುಭಾರ ಕುಸಿತವಾಗುವ ಲಕ್ಷಣಗಳು ಕಂಡುಬಂದಿವೆ. ಆ ವೇಳೆ ರಾಜ್ಯದಲ್ಲೂ ಮಳೆಯಾಗಬಹುದು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ’ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.