News Kannada
Tuesday, December 06 2022

ಬಾಗಲಕೋಟೆ

ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ

Photo Credit :
ಬಾಗಲಕೋಟೆ :ಗಣೇಶ ಚತುರ್ಥಿ ಹಬ್ಬಕ್ಕೆ ಸರಕಾರ ಪರಿಷ್ಕøತ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪಾಲನೆಗೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಗಣೇಶ ಹಬ್ಬ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು ಪೊಲೀಸ್ ಇಲಾಖೆಯಿಂದ ಎನ್‍ಓಸಿ ಪಡೆಯುವದು ಕಡ್ಡಾಯವಾಗಿದೆ. ಯಾವುದೇ ರೀತಿಯ ವಿನಾಯಿತಿ ಇರುವದಿಲ್ಲ. ವಿನಾಯಿತಿ ನೀಡಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಳವಾಗಿ, ಭಕ್ತಿಪೂರಕವಾಗಿ ಗಣೇಶ ಚತುರ್ಥಿ ಆಚರಣೆಗೆ ಅವಕಾಶ ಕಲ್ಪಿಸುವ ಮೂಲಕ ಸರಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಾರ್ಗಸೂಚಿಗಳನ್ನು ನೂರಕ್ಕೆ ನೂರರಷ್ಟು ಪಾಲನೆಯಾಗಬೇಕು. ಯಾವುದೇ ರೀತಿಯ ಸಡಿಲಿಕೆ ಇರುವದಿಲ್ಲವೆಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಪ್ರತಿ ವಾರ್ಡಗೆ ಒಂದು ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿರುತ್ತದೆ. ರಸ್ತೆ ಮತ್ತು ಪುಟ್‍ಪಾತ್‍ಗಳ ಮೇಲೆ ಪೆಂಡಾಲ ಹಾಕುವಂತಿಲ್ಲ. ಗಣೇಶ ಪ್ರತಿಷ್ಠಾಪನೆಗೆ 5 ದಿನಕ್ಕೆ ಸೀಮಿತಗೊಳಿಸಲಾಗಿದ್ದು, 5ನೇ ದಿನ ಮಂಗಳವಾರ ವಿಸರ್ಜನೆ ಮಾಡಲು ಆಗದಿದ್ದರೆ ಒಂದು ದಿನ ಮುಂಚೆನೆ ವಿಜರ್ಸನೆ ಮಾಡಬೇಕು. ಮತ್ತೊಂದು ದಿನ ವಿಸರ್ಜನೆಗೆ ಅವಕಾಶವಿರುವದಿಲ್ಲವೆಂದು ತಿಳಿಸಿದರು. ಗಣೇಶ ಪ್ರತಿಷ್ಠಾಪನೆ ದಿನ, ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆಗೆ ಅವಕಾಶವಿರುವದಿಲ್ಲ ಎಂದರು.
ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಬಂದ ಅರ್ಜಿಗಳನ್ನು ಪೆಂಡಿಂಗ್ ಇಟ್ಟುಕೊಳ್ಳಬಾರದು. ಗಣೇಶ ವಿಸರ್ಜನೆಗೆ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಸಂಚಾರಿ ತೊಟ್ಟಿ ವ್ಯವಸ್ಥೆ ಕಲ್ಪಿಸಬೇಕು. ವಿಸರ್ಜನೆ ವೇಳೆ ಜಂಟಿ ತಂಡ ರಚಿಸಿ ಕೆಲಸ ನಿರ್ವಹಿಸಬೇಕು. ಮಾರ್ಗಸೂಚಿ ಪಾಲನೆ ಮಾಡುವ ಮೂಲಕ ಸರಕಾರಿ ಕಚೇರಿ, ಪೊಲೀಸ್ ಠಾಣೆ ಮತ್ತು ಹೆಸ್ಕಾಂ ಕಚೇರಿಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿ ಉಳಿದವರಿಗೆ ಮಾದರಿಯಾಗಬೇಕು. ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಕೇವಲ ದರ್ಶನಕ್ಕೆ ಸೀಮಿತವಾಗಿದ್ದು, ಯಾವುದೇ ರೀತಿಯ ಮನರಂಜನೆ ಕಾರ್ಯಕ್ರಮ ಹಮ್ಮಿಕೊಳ್ಳುವಂತಿಲ್ಲವೆಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಉಪ ವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ, ಎಂ.ಗಂಗಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವೃತ್ತ ನಿರೀಕ್ಷಕ ಪಟ್ಟಣಶೆಟ್ಟಿ, ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಹಾಗೂ ಇತರರು ಉಪಸ್ಥಿತರಿದ್ದರು.
See also  ಸಿ.ಎಂ.ಇಬ್ರಾಹಿಂರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ; ಸಚಿವ ಕೆ.ಎಸ್. ಈಶ್ವರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು