NewsKarnataka
Monday, October 25 2021

ಬಾಗಲಕೋಟೆ

75 ಸಾವಿರ ಲಸಿಕೆ ಹಾಕುವ ಗುರಿ : ಡಿಸಿ ರಾಜೇಂದ್ರ

ಬಾಗಲಕೋಟೆ :  ಮಹಾಮಾರಿ ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳುವುದು ಅವಶ್ಯವಾಗಿದ್ದು, ಈ ಹಿನ್ನಲೆಯಲ್ಲಿ ಸೆಪ್ಟೆಂಬರ 17 ರಂದು ಜಿಲ್ಲೆಯಾದ್ಯಂತ ಬೃಹತ್ ಲಸಿಕೆ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಒಂದೇ ದಿನದಲ್ಲಿ 75 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆ ಮೇರೆಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ರಾಜ್ಯಾದ್ಯಂತ ಸೆಪ್ಟೆಂಬರ 17 ರಂದು ಬೃಹತ್ ಲಸಿಕಾ ಮಹಾಮೇಳ ಹಮ್ಮಿಕೊಳ್ಳಲಾಗಿದೆ. ಒಂದೇ ದಿನದಲ್ಲಿ ರಾಜ್ಯದ 30 ಲಕ್ಷ ಜನರಿಗೆ ಉಚಿತ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದೆ. ಬಾಗಲಕೋಟೆ ಜಿಲ್ಲೆಗೆ 75 ಸಾವಿರ ಜನರಿಗೆ ಲಸಿಕೆ ಹಾಕುವ ಗುರಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಲಸಿಕಾಕರಣದ ಗುರಿಯನ್ನು ಕಡ್ಡಾಯವಾಗಿ ತಲುಪುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ತೊಡಗಿಸಿಕೊಳ್ಳಲಾಗುತ್ತಿದೆ. ಮೇಲ್ವಿಚಾರಣೆಗಾಗಿ 69 ಜನ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಕೋವಿಡ್ ಮಹಾಮೇಳದಲ್ಲಿ ಮುಖ್ಯಮಂತ್ರಿಗಳ ನಿರ್ದೇಶನದಂತೆ ವಿಶೇಷವಾಗಿ ಬಡತನ ರೇಖೆಗಿಂತ ಕೆಳಗಿರುವವರು, ಕಟ್ಟಡ ಕಾರ್ಮಿಕರು, ದುಡಿಯುವ ವರ್ಗ, ಅಲ್ಪಸಂಖ್ಯಾತರ ಸಮೂಹ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದೂಳಿದ ಸಮೂಹದಲ್ಲಿ ಲಸಿಕೆ ಪಡೆಯದವರಿಗೆ ಲಸಿಕೆ ಹಾಕಲು ಯೋಜಿಸಲಾಗಿದೆ. ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಲಾಗಿದ್ದು, ಎಲ್ಲರೂ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಶೇ.66 ರಷ್ಟು ಲಸಿಕೆ ನೀಡಲಾಗಿದೆ. ಸೆಪ್ಟೆಂಬರ 15 ರವರೆಗೆ 18 ವರ್ಷ ಮೇಲ್ಪಟ್ಟ 11,98,797 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಈ ಪೈಕಿ 9,17,502 ಜನರಿಗೆ ಮೊದಲನೇ ಡೋಸ್, 2,81,295 ಜನರಿಗೆ ಎರಡನೇ ಡೋಜ್ ಸಲಿಕೆ ಪಡೆದುಕೊಂಡಿದ್ದಾರೆ. ಈ ವರೆಗೆ ಒಂದೇ ದಿನದಲ್ಲಿ 49 ಸಾವಿರ ಜನರಿಗೆ ಲಸಿಕೆ ನೀಡುವ ಮೂಲಕ ದಾಖಲೆ ಮಾಡಲಾಗಿದೆ. ಮೊದಲನೇ ಡೋಸ್ ಪಡೆದು ಎರಡನೇ ಡೋಸ್ ಪಡೆಯದೇ ಉಳಿದಿದ್ದು, ಮಹಾಮೇಳದಲ್ಲಿ ಆದ್ಯತೆ ನೀಡಲಾಗುತ್ತಿದೆ. 2ನೇ ಡೋಸ್ ಪಡೆಯದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಲು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!