News Karnataka Kannada
Saturday, April 27 2024
ಬಾಗಲಕೋಟೆ

ಬಾಗಲಕೋಟೆ: ಟ್ರಕ್‌ ಡಿಕ್ಕಿಯಾಗಿ ಬೈಕ್‌ ನಲ್ಲಿದ್ದ ಮೂವರು ಸಾವು

Uttar Pradesh: Three killed as truck rams into dhaba
Photo Credit : News Kannada

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಬೈಕ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀನಕ್ತ ಮಾದರ (39), ಶಾಂತವ್ವ ಕಟ್ಟಿಮನಿ (43) ಮತ್ತು ಮಾಂತವ್ವ ಮರಡಿ (75) ಮೃತರು.

ಶ್ರೀಕಾಂತ್ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಮಹಿಳೆಯರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಟ್ರಕ್‌ ಬೈಕ್‌ಗೆ ಡಿಕ್ಕಿಯಾಗುವ ಮೊದಲು ಅಮೀನಗಡ ಪಟ್ಟಣದ ಬಳಿ ಕಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿತ್ತು. ನಂತರ ಮೂರು ಕಿಲೋಮೀಟರ್ ದೂರದಲ್ಲಿ ಮತ್ತೊಮ್ಮೆ ಟ್ರಕ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್‌ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಅಮೀನಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು