News Kannada
Saturday, March 02 2024
ಬೆಳಗಾವಿ

ಎಸ್ಸೆಸ್ಸೆಲ್ಸಿ ಪರೀಕ್ಷೆ: 6 ಮಂದಿ ನಕಲಿ ಅಭ್ಯರ್ಥಿಗಳು ಪೊಲೀಸರ ವಶಕ್ಕೆ

A short story writing competition for students
Photo Credit :

ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್‌.ಡಿ. ಕಾಲೇಜು ಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯಲು ಬಂದಿದ್ದ ಯುವತಿ ಸೇರಿದಂತೆ 6 ಮಂದಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಗೋಕಾಕ್ ತಾಲ್ಲೂಕು ಗೋಡಗೇರಿಯ ರಾಹುಲ್ ಕಿಳ್ಳಿಕೇತರ, ಕೊಂಕಣಿವಾಡಿಯ ಭೀಮಶಿ ಹುಲಿಕುಂದ, ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಕೊಪ್ಪ ಎಸ್‍.ಕೆ.

ಗ್ರಾಮದ ಕಾರ್ತಿಕ್ ಕುಂಬಾರ್, ಚಿಕ್ಕಾಲಕೊಪ್ಪ ಗ್ರಾಮದ ಸಿದ್ದು ಜೋಗಿ, ಗಿರಸಾಗರ ಗ್ರಾಮದ ಮಹಾಂತೇಶ್ ಡೊಳ್ಳಿನವರ ಮತ್ತು ಬಾಗಲಕೋಟೆ ಜಿಲ್ಲೆ ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ಸವಿತಾ ಹೊಸೂರು ಸಿಕ್ಕಿಬಿದ್ದವರು.

‘ಪರೀಕ್ಷಾ ಅಕ್ರಮ ನಡೆಯದಂತೆ ನೋಡಿಕೊಳ್ಳುವುದಕ್ಕಾಗಿ ಪ್ರವೇಶ ದ್ವಾರದಲ್ಲಿ ವಿದ್ಯಾರ್ಥಿಗಳ ಗುರುತಿನ ಚೀಟಿ ಮೊದಲಾದ ದಾಖಲೆಗಳನ್ನು ಪರಿಶೀಲಿಸುವಾಗ, ಆರು ಮಂದಿ ನಕಲಿ ಅಭ್ಯರ್ಥಿಗಳು ಸಿಕ್ಕಿಬಿದ್ದರು. ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ’ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಮೋಹನ್‌ಕುಮಾರ್‌ ಹಂಚಾಟೆ ‘ಪ್ರಜಾವಾಣಿ’ಗೆ ತಿಳಿಸಿದರು.

ಬೆಳಗಾವಿ ನಗರದ ಸರ್ದಾರ್‌ ಪ್ರೌಢಶಾಲೆ ಸೇರಿದಂತೆ ಕೆಲವೆಡೆ ಕೆಲವು ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಯೇ ಬಂದಿದ್ದರು. ಶಿಕ್ಷಕರ ಸೂಚನೆ ಮೇರೆಗೆ, ಅವರು ಕೊಠಡಿಯೊಂದರಲ್ಲಿ ಹಿಜಾಬ್‌ ತೆಗೆದಿಟ್ಟು ಬಳಿಕ ಪರೀಕ್ಷೆಗೆ ಹಾಜರಾದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು