News Karnataka Kannada
Wednesday, April 24 2024
Cricket
ಬೆಳಗಾವಿ

ಬೆಳಗಾವಿ: ನಡುರಸ್ತೆಯಲ್ಲಿ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪತಿ

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit :

ಬೆಳಗಾವಿ : ನಡುರಸ್ತೆಯಲ್ಲಿ ಸಾರ್ವಜನಿಕರ ಎದುರೇ ಪತಿ ಮಹಾಶಯನೊಬ್ಬ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘೋರ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಹೀನಾ ಕೌಸರ್ (24) ಕೊಲೆಯಾದ ಮಹಿಳೆ. 4 ವರ್ಷಗಳ ಹಿಂದೆ 34 ವರ್ಷದ ಮಂಜೂರ್ ಎಂಬಾತನನ್ನು ಹೀನಾ ಕೌಸರ್ ವಿವಾಹವಾಗಿದ್ದರು. ಪತಿ ಕಿರುಕುಳ, ಕೌಟುಂಬಿಕ ಕಲಹಕ್ಕೆ ಬೇಸತ್ತು 8 ತಿಂಗಳ ಹಿಂದೆ ವಿಚ್ಛೇದನಕ್ಕಾಗಿ ಹೀನಾ ಅರ್ಜಿ ಸಲ್ಲಿಸಿದ್ದರು.

ಆದರೆ ವಿಚ್ಛೇದನ ನೀಡದಂತೆ ಮಂಜೂರ್ ಕೇಳಿಕೊಂಡಿದ್ದ. ಆದರೆ ಹೀನಾ ಒಪ್ಪಿರಲಿಲ್ಲ ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಇದೇ ಕಾರಣಕ್ಕೆ ಇಂದು ಕೋರ್ಟ್ ನಿಂದ ಪತ್ನಿ ವಾಪಸ್ ಆಗುತ್ತಿರುವುದನ್ನೇ ಕಾದು ರಸ್ತೆಯಲ್ಲಿಯೇ ಪತ್ನಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಹೀನಾ ಆಸ್ಪತ್ರೆಗೆ ದಾಖಲಾಗುವ ಮೊದಲೇ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು