ಬೆಳಗಾವಿ : ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್ ನೀಡಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಸಂಚಾರ ಮಿತಿಯನ್ನು 100 ಕಿ.ಮೀಗೆ ಹೆಚ್ಚಳ ಮಾಡುವ ಬಗ್ಗೆ ಸರ್ಕಾರ ನಿರ್ಧರಿಸಲಿದೆ ಎಂದು ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಮಾತನಾಡಿದ ಶ್ರೀರಾಮುಲು ರಾಜ್ಯ ರಸ್ತೆ ಸಾರಿಗೆ ಬಸ್ ಗಳಲ್ಲಿ ಹಾಲಿ 60 ಕಿ.ಮೀ ವರೆಗೆ ವಿದ್ಯಾರ್ಥಿಗಳು ಬಸ್ ಪಾಸ್ ತೋರಿಸಿ ಪ್ರಯಾಣ ಮಾಡಬಹುದಾಗಿದೆ. ಇದನ್ನು 100 ಕಿ.ಮೀಗೆ ಹೆಚ್ಚಳ ಮಾಡುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದರು.
ಸದ್ಯ, ಶಾಲಾ ಕಾಲೇಜುಗಳಿಗೆ ಶೈಕ್ಷಣಿಕ ದಾಖಲೆ ನೀಡಿ ಸೇವಾ ಸಿಂಧು ಮೂಲಕ ಬಸ್ ಪಾಸ್ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.