News Kannada
Tuesday, March 28 2023

ಬೆಳಗಾವಿ

ಬೆಳಗಾವಿ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

Photo Credit :

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಬಳಿಯ ವಿರಪನ ಕೊಪ್ಪ ಕ್ರಾಸ್ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಮೂಲದವರು. ಧಾರವಾಡ ಕಡೆಯಿಂದ ಬೆಳಗಾವಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಮುಂದಿದ್ದ ಲಾರಿಗೆ ಹಿಂದಿನಿಂದ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಸ್ಥಳದಲ್ಲಿಯೇ ಸಾವಿಗಿಡಾಗಿದ್ದಾರೆ . ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ .

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಮೂಲದವರಾದ ಇವರೆಲ್ಲ ಬೆಳಗಾವಿಗೆ ಆಸ್ಪತ್ರೆಗೆಂದು ಬರುತ್ತಿದ್ದರು ಎನ್ನಲಾಗಿದೆ . ವಾಸಿಂ ಖಾನ್ ( 40 ), ಸೈಯದ್ ಇಸ್ಮಾಯಿಲ್ ದಾವುದ್ ( 65 ), ಸುಶೀಲಾ ಫರ್ನಾಂಡಿಸ್ ( 60 ) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಜಾವೇದ್ ( 41 ) ಹಾಗೂ ಮುಕ್ತಿಯಾರ್ ಸಯ್ಯದ್ ( 60 ) ತೀವ್ರ ಗಾಯಗೊಂಡಿದ್ದು ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

See also  ಈಶ್ವರಪ್ಪ ಬಂಧಿಸುವಂತೆ ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ; ಡಿ.ಕೆ. ಶಿವಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು