News Kannada
Saturday, September 24 2022

ಬೆಳಗಾವಿ

ಕಾಂಗ್ರೆಸ್ ಪಕ್ಷದವರು ಪಾದಯಾತ್ರೆ ನಡೆಸುತ್ತಿರುವುದು ಯಾರ ವಿರುದ್ಧ: ಸಚಿವ ಗೋವಿಂದ ಕಾರಜೋಳ - 1 min read

Photo Credit :

ಬೆಳಗಾವಿ: ಸುಪ್ರೀಂ ಕೋರ್ಟ್ ನಲ್ಲಿ ಮೇಕೆದಾಟು ಪ್ರಕರಣವಿದ್ದು, ಕಾಂಗ್ರೆಸ್ ಪಕ್ಷದವರು ಪಾದಯಾತ್ರೆ ನಡೆಸುತ್ತಿರುವುದು ಯಾರ ವಿರುದ್ಧ ಎನ್ನುವುದು ಸ್ಪಷ್ಟವಾಗಿ ತಿಳಿಯಬೇಕಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನ್ಯಾಯಾಲಯದಲ್ಲಿ ಪ್ರಕರಣವಿರುವಾಗ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿರುವುದು ಎಷ್ಟು ಸರಿಯಾಗಿದೆ ಎಂದು ಪ್ರಶ್ನಿಸಿದ ಅವರು ಪ್ರಚಾರಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ ನೆಪವೊಡ್ಡಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

2013 ರಿಂದ ಕಾಂಗ್ರೆಸ್ ‌ನಡಿಗೆ ಕೃಷ್ಣೆಯ ಕಡೆಗೆ ಎಂದು ಹೇಳಿದ್ದ ವಿಪಕ್ಷ ‌ನಾಯಕ ಸಿದ್ದರಾಮಯ್ಯ ಅವರ ಅಧಿಕಾರದಲ್ಲಿ ಮಾಡಿದ್ದು ಏನು ? ಎಂದು ಪ್ರಶ್ನಿಸಿದ ಅವರು, ಅಂದು ಸಿದ್ದರಾಮಯ್ಯ ಆಣೆ ಮಾಡಿ ಪ್ರತಿ ವರ್ಷ 10 ಸಾವಿರ ಕೋಟಿ‌ ಖರ್ಚು ಮಾಡುತ್ತೇನೆ ಎಂದು ಸುಳ್ಳು ಹೇಳಿದರು. ಈಗ ಪಾದಯಾತ್ರೆ ಮಾಡುವುದು ಎಷ್ಟು ಸರಿ ಎಂದರು. 133 ಟಿಎಂಸಿ ನೀರು. ನ್ಯಾಯಾಧೀಕರಣದಲ್ಲಿ ನಮಗೆ ಸಿಕ್ಕಿದ್ದು, 2011-12 ರಲ್ಲಿ ನಮ್ಮ ಸರಕಾರದಲ್ಲಿ ನೀರಾವರಿ ಯೋಜನೆಗೆ ಮಂಜೂರಾತಿ ನೀಡಿದೇವು. ಆದರೆ ಬಳಿಕ ಬಂದ ಕಾಂಗ್ರೆಸ್ ಸರಕಾರ ಏನೂ ಮಾಡಲಿಲ್ಲ ಎಂದು ತಿಳಿಸಿದರು.

See also  ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು