News Kannada
Monday, January 30 2023

ಬೆಳಗಾವಿ

ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ 15 ವಿದ್ಯಾರ್ಥಿಗಳು ಸಸ್ಪೆಂಡ್

Photo Credit :

ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್) ಕಾಲೇಜಿನ ಹಿರಿಯ-ಕಿರಿಯ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ ನಡೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಮೆಡಿಕಲ್ ಕಾಲೇಜು ಚುನಾವಣೆ ವೈಷಮ್ಯದ ಹಿನ್ನೆಲೆಯಲ್ಲಿ ವಸತಿ ನಿಲಯದಲ್ಲಿ ಗಲಾಟೆ ನಡೆದಿದೆ. ಮೇ 4ರ ತಡರಾತ್ರಿ ಈ ಘಟನೆ ನಡೆದಿದ್ದು, ರಾಜಸ್ಥಾನ ಮೂಲದ ಅಂತಿಮ ವರ್ಷದ ವಿದ್ಯಾರ್ಥಿ ಮೇಲೆ 15 ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ 15 ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಸಸ್ಪೆಂಡ್ ಮಾಡಿದೆ.

ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಪ್ರಕರಣ ಆಡಳಿತಾಧಿಕಾರಿ ಮಾಹಿತಿ
ಘಟನೆಯಲ್ಲಿ ರಾಜ್ಯಸ್ಥಾನ ಮೂಲದ ಅಂತಿಮ ವರ್ಷದ ಮೆಡಿಕಲ್ ವಿದ್ಯಾರ್ಥಿ ಬುರಾರಾಮ್ ಗೋಧರೆ ತೀವ್ರ ಗಾಯಗೊಂಡಿದ್ದಾರೆ. ತೀವ್ರ ಹಲ್ಲೆಯಿಂದ ಬುರಾರಾಮ್‌ ಅವರ ಮೂಗು, ಕಿರು ಬೆರಳಿಗೆ ಗಾಯಗಳಾಗಿವೆ. ಮೂಗಿನ ಶಸ್ತ್ರ ಚಿಕಿತ್ಸೆ ಸಲುವಾಗಿ ಬುರಾರಾಮ್‌ ರಾಜಸ್ಥಾನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಬಿಮ್ಸ್ ನಿರ್ದೇಶಕರು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಘಟನೆಗೆ ಕಾರಣ? ಮೇ 1ರಂದು ಬಿಮ್ಸ್ ಕಾಲೇಜಿನ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಕೃಷ್ಣಾ ರಾಥೋಡ್ ಹಾಗೂ ಆತನ ತಂಡಕ್ಕೆ ಹಲ್ಲೆಗೊಳಗಾದ ಬುರಾರಾಮ್ ವಿರೋಧ ಮಾಡಿದ್ದರು. ಚುನಾವಣೆ ನಡೆದು ನಾಲ್ಕು ದಿನಗಳ ನಂತರ ಮಧ್ಯರಾತ್ರಿ ಬುರಾರಾಮ್ ರೂಮ್‌ಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಸೆಕ್ಯೂರಿಟಿ ಗಾರ್ಡ್ ಬರುತ್ತಿದ್ದಂತೆ ಗಲಾಟೆ ಮಾಡುತ್ತಿದ್ದ ವಿದ್ಯಾರ್ಥಿಗಳು‌ ಸ್ಥಳದಿಂದ ಕಾಲ್ಕಿತ್ತಿದ್ದರು ಎಂದು ಬಿಮ್ಸ್​​ ಆಡಳಿತಾಧಿಕಾರಿ ಆಮ್ಲಾನ್​ ಆದಿತ್ಯ ಬಿಸ್ವಾಸ್​ ಮಾಹಿತಿ ನೀಡಿದ್ದಾರೆ.

See also  ಮೋದಿಯವರ ಯೋಜನೆಯನ್ನು ದೇಶದ ಜನತೆ ಮೆಚ್ಚಿಕೊಂಡಿದ್ದಾರೆ: ಅರುಣ್ ಸಿಂಗ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು