ಬೆಳಗಾವಿ: ಅನಾರೋಗ್ಯದಿಂದಾಗಿ ಪತ್ನಿ ಸಾವನ್ನಪ್ಪಿದ ಹಿನ್ನೆಲೆ ಮನನೊಂದು ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕೊಡಿ ಝಂಜರವಾಡ ಗ್ರಾಮದಲ್ಲಿ ನಡೆದಿದೆ.
ಸದಾಶಿವ ರಾಮಪ್ಪ ಕಾಂಬಳೆ (26) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಎರಡು ವರ್ಷದ ಹಿಂದೆಯಷ್ಟೇ ಸದಾಶಿವ ರಾಮಪ್ಪ ಕಾಂಬಳೆ, ರೂಪಾ ಅವರನ್ನು ವಿವಾಹವಾಗಿದ್ದರು. ಆದರೆ ಅನಾರೋಗ್ಯ ಕಾರಣ ರೂಪ ಅವರು ಕಳೆದ ಎರಡು ದಿನದ ಹಿಂದೆಯಷ್ಟೇ ನಿಧನರಾಗಿದ್ದರು.
ಮನನೊಂದು ಸದಾಶಿವ ರಾಮಪ್ಪ ಕಾಂಬಳೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ. ಕೂಡಲೇ ಅವರನ್ನು ವಿಜಯಪುರ ಜಿಲ್ಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಕಳೆದ ರಾತ್ರಿ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.