ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿಯ ಸುವರ್ಣಸೌಧ ಸಜ್ಜಾಗಿದೆ. ಸೋಮವಾರದಿಂದ ಡಿ.30ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ಹತ್ತು ದಿನಗಳ ಕಾಲ ಕಲಾಪ ನಡೆಯಲಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪ್ರದೇಶ ವಿಶೇಷ ಹೂಡಿಕೆ ವಿಧೇಯಕ ಸೇರಿ ಆರು ಪ್ರಮುಖ ವಿಧೇಯಕಗಳು ಮಂಡನೆಯಾಗಲಿವೆ.
ಅಧಿವೇಶನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಸೋಮವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಜೆಡಿಎಸ್ ಸೋಮವಾರ ಕಲಾಪ ಆರಂಭಕ್ಕೆ ಮುನ್ನ ಶಾಸಕರ ಸಭೆ ನಡೆಸಲಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇನ್ನಷ್ಟೇ ನಿಗದಿಯಾಗಬೇಕಾಗಿದೆ.