ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ಯಾತ್ರಾರ್ಥಿಗಳು ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ವಾಹನ ಅಪಘಾತದಲ್ಲಿ ಆರು ಮಂದಿ ಮೃತಪಟ್ಟು, 16ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಅಪಘಾತದಲ್ಲಿ 16 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ ಅವರು, ಈ ಸಂಬಂಧ ಜಿಲ್ಲಾಧಿಕಾರಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ನಾವು ಮೃತರ ಕುಟುಂಬದ ದುಃಖ ಮತ್ತು ನೋವಿನಲ್ಲಿದ್ದೇವೆ. ಅಗಲಿದವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಗೋವಿಂದ ಕಾರಜೋಳ ಹೇಳಿದರು.