ಬೆಳಗಾವಿ: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ನಡೆದ ವಾಯುಪಡೆಯ ಯುದ್ಧ ವಿಮಾನಗಳ ಅಪಘಾತದಲ್ಲಿ ಹುತಾತ್ಮರಾದ ಪೈಲಟ್, ವಿಂಗ್ ಕಮಾಂಡರ್ ಬೆಳಗಾವಿಯ ಗಣೇಶಪುರದ ಹನುಮಂತರಾವ್ ರೇವಣಸಿದ್ದಪ್ಪ ಸಾರಥಿ(34) ಅವರಿಗೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಹನುಮಂತರಾವ್ ಅವರ ಪಾರ್ಥಿವ ಶರೀರವನ್ನು ಸೇನೆಯ ವಿಶೇಷ ವಿಮಾನದ ಮೂಲಕ ಭಾನುವಾರ(ಜ.29) ಮಧ್ಯಾಹ್ನ 12.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತರಲಾಯಿತು.
ಈ ಸಂದರ್ಭದಲ್ಲಿ ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ.ದರ್ಶನ್, ಮತ್ತಿತರ ಗಣ್ಯರು ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.
ಮೃತ ಹನುಮಂತರಾವ್ ಸಾರಥಿ ಅವರು ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ, ಸಹೋದರ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.