News Kannada
Sunday, March 03 2024
ಬೆಳಗಾವಿ

ಅರಣ್ಯಾಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಬೆಳ್ತಂಗಡಿ ಶಾಸಕ ಪೂಂಜಾ

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌ ದಾಖಲಿಸಿ ಮುಚ್ಚಳಿಕೆ ಬರೆಸಿಕೊಂಡ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ.
Photo Credit : News Kannada

ಬೆಳಗಾವಿ: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌ ದಾಖಲಿಸಿ ಮುಚ್ಚಳಿಕೆ ಬರೆಸಿಕೊಂಡ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ. ಕಳೆಂಜದಲ್ಲಿ ಅರಣ್ಯಾಧಿಕಾರಿಗಳಿಂದ ಮನೆ ತೆರವು ಪ್ರಕರಣವನ್ನು ಬಿಜೆಪಿ ಶಾಸಕ ಹರೀಶ್​​ ಪೂಂಜಾ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದರು. ಆದರೆ ಈ ವೇಳೆ ಬರಗಾಲ ಚರ್ಚೆ ಆರಂಭಿಸಿ ಎಂದು ಸ್ಪೀಕರ್ ಯು.ಟಿ.ಖಾದರ್​​ ಹೇಳಿದ್ದಾರೆ.

ಅವಕಾಶ ನೀಡದ್ದಕ್ಕೆ ಸಿಟ್ಟಿಗೆದ್ದ ಶಾಸಕ ಪೂಂಜಾ ಸದನದ ಬಾವಿಗಿಳಿದು ಜೆಡಿಎಸ್​, ಬಿಜೆಪಿ ಸದಸ್ಯರಿಂದ ಪ್ರತಿಭಟನೆ ಮಾಡಿದ್ದಾರೆ. ಬಳಿಕ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಸ್ಪೀಕರ್ ಖಾದರ್ ಅವಕಾಶ ನೀಡಿದ್ದು,​ ಬಳಿಕ ವಿಪಕ್ಷ ಸದಸ್ಯರು ಧರಣಿ ಹಿಂಪಡೆದಿದ್ದಾರೆ. ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಸದನದಲ್ಲಿ ಪಕ್ಷಾತೀತ ಆಗ್ರಹಿಸಿದ್ದು, ಹಕ್ಕುಬಾಧ್ಯತಾ ಸಮಿತಿಗೆ ಸ್ಪೀಕರ್ ಖಾದರ್ ಶಿಫಾರಸು ಮಾಡಿದ್ದಾರೆ.​ ಅರಣ್ಯ ಇಲಾಖೆಯ ಮೂವರು ಅಧಿಕಾರಿಗಳ ಅಮಾನತಿಗೆ ಆಗ್ರಹಿಸಲಾಗಿದೆ. ಶಾಸಕ ಹರೀಶ್​ ಪೂಂಜಾ ವಿರುದ್ಧ FIR ವಾಪಸ್​​ಗೆ ಬಿಜೆಪಿ ಆಗ್ರಹಿಸಿದ್ದು, ಎಫ್​ಐಆರ್ ಆಗಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. FIR ದಾಖಲಾಗಿದ್ದರೆ ಹಿಂಪಡೆಯಿರಿ ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದ್ದಾರೆ.

ಕ್ರಿಯಾಲೋಪ ಎತ್ತಿದ ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್​ ಸಚಿವರ ಉತ್ತರ ವಿರೋಧಿಸಿ ಹಕ್ಕುಚ್ಯುತಿ ಸಮಿತಿಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ. ಸದನದ ಬಾವಿಗಿಳಿದು ಬಿಜೆಪಿ ಸದಸ್ಯರಿಂದ ಧರಣಿ, ಧಿಕ್ಕಾರ ಘೋಷಣೆ ಹಾಕಲಾಗಿದೆ. ಸಚಿವರ ಉತ್ತರದ ಬಳಿಕ ರೂಲಿಂಗ್ ನೀಡುವುದಾಗಿ ಸ್ಪೀಕರ್ ಹೇಳಿದ್ದಾರೆ. ಬಳಿಕ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ಹಿಂಪಡೆದಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು